alex Certify BIG NEWS: ಪ್ರಜ್ವಲ್ ರೇವಣ್ಣ ಬೆನ್ನಲ್ಲೇ ಹೆಚ್.ಡಿ.ರೇವಣ್ಣ ಶಾಸಕ ಸ್ಥಾನಕ್ಕೂ ಕುತ್ತು; ಸಮನ್ಸ್ ಜಾರಿಗೆ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪ್ರಜ್ವಲ್ ರೇವಣ್ಣ ಬೆನ್ನಲ್ಲೇ ಹೆಚ್.ಡಿ.ರೇವಣ್ಣ ಶಾಸಕ ಸ್ಥಾನಕ್ಕೂ ಕುತ್ತು; ಸಮನ್ಸ್ ಜಾರಿಗೆ ಆದೇಶ

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಸಂಸದ ಸ್ಥಾನ ಅಸಿಂಧು ಬೆನ್ನಲ್ಲೇ ಇದೀಗ ಶಾಸಕ ಹೆಚ್.ಡಿ.ರೇವಣ್ಣ ಸ್ಥಾನಕ್ಕೂ ಕುತ್ತು ಬಂದಿದ್ದು, ಹೈಕೋರ್ಟ್ ಸಮನ್ಸ್ ಜಾರಿಗೆ ಆದೇಶ ನೀಡಿದೆ.

ಪರಾಜಿತ ಬಿಜೆಪಿ ಅಭ್ಯರ್ಥಿ ದೇವರಾಜೇಗೌಡ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯಪೀಠ, ಶಾಸಕ ಹೆಚ್.ಡಿ.ರೇವಣ್ಣ ಸೇರಿದಂತೆ ದೇವರಾಜೇಗೌಡ ವಿರುದ್ಧ ಸ್ಪರ್ಧಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೂ ಸಮನ್ಸ್ ಜಾರಿ ಮಾಡುವಂತೆ ಆದೇಶ ಹೊರಡಿಸಿದೆ.

ವಿಧಾನಸಭೆ ಕಾರ್ಯದರ್ಶಿ ಮೂಲಕ ಸಮನ್ಸ್ ಜಾರಿ ಮಾಡಲು ಹೈಕೋರ್ಟ್ ಆದೇಶ ಹೊರಡಿಸಿದೆ. ಚುನಾವಣಾ ಅಕ್ರಮದ ಮೂಲಕ ಹೆಚ್.ಡಿ.ರೇವಣ್ಣ ಜಯಗಳಿಸಿದ್ದಾರೆ. 2ನೇ ಸ್ಥಾನದಲ್ಲಿದ್ದ ಶ್ರೇಯಸ್ ಪಟೇಲ್ ಮತದಾರರಿಗೆ ಆಮಿಷವೊಡ್ಡಿದ್ದಾರೆ. ಹಾಗಾಗಿ ಇಬ್ಬರ ಮತಗಳಿಕೆಯನ್ನು ಅಸಿಂಧುಗೊಳಿಸುವಂತೆ ಕೋರಿ ದೇವರಾಜೇಗೌಡ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...