alex Certify ಬಿಜೆಪಿಗೆ ಬಿಸಿತುಪ್ಪವಾದ ಹೆಚ್. ವಿಶ್ವನಾಥ್ ವಿರುದ್ಧ ಶಿಸ್ತು ಕ್ರಮ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿಗೆ ಬಿಸಿತುಪ್ಪವಾದ ಹೆಚ್. ವಿಶ್ವನಾಥ್ ವಿರುದ್ಧ ಶಿಸ್ತು ಕ್ರಮ…?

ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಗೆ ಕಾರಣರಾದವರಲ್ಲಿ ಒಬ್ಬರಾದ ಹೆಚ್. ವಿಶ್ವನಾಥ್ ವಿರೋಧ ಪಕ್ಷದವರೂ ನಾಚುವಂತೆ ಸರ್ಕಾರದ ಆಡಳಿತ ವೈಖರಿ ಬಗ್ಗೆ ಟೀಕಿಸುವ ಮೂಲಕ ಬಿಜೆಪಿಗೆ ಬಿಸಿತುಪ್ಪವಾಗಿದ್ದಾರೆ. ಸಮಯ ಬಂದಾಗಲೆಲ್ಲ ಸಿಎಂ, ಸರ್ಕಾರದ ಆಡಳಿತ ವೈಖರಿಯನ್ನು ಟೀಕಿಸುವ ಮೂಲಕ ಮಗ್ಗುಲ ಮುಳ್ಳಾಗಿದ್ದಾರೆ ಎಂಬ ಮಾತುಗಳು ಬಿಜೆಪಿ ಪಾಳಯದಲ್ಲಿ ಕೇಳಿಬಂದಿವೆ.

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಹೆಚ್. ವಿಶ್ವನಾಥ್ ಸಚಿವರಾಗಬೇಕಿತ್ತು. ಆದರೆ, ಕಾನೂನು ತೊಡಕಿನಿಂದಾಗಿ ಸಾಧ್ಯವಾಗಿಲ್ಲ. ಮುಖ್ಯಮಂತ್ರಿ ಆಡಳಿತ ವೈಖರಿ, ಸಿಎಂ ಪುತ್ರ ವಿಜಯೇಂದ್ರ ಹಸ್ತಕ್ಷೇಪ, ಜಿಂದಾಲ್ ಗೆ ಭೂಮಿ ಪರಭಾರೆ ಆರೋಪ ಮೊದಲಾದ ವಿಚಾರಗಳನ್ನು ಪ್ರಸ್ತಾಪಿಸಿ ಹೆಚ್. ವಿಶ್ವನಾಥ್ ಬಿಜೆಪಿಗೆ ಬಿಸಿತುಪ್ಪವಾಗಿ ಪರಿಣಮಿಸಿದ್ದಾರೆ.

ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಭೇಟಿ ನೀಡಿದ್ದ ಸಂದರ್ಭದಲ್ಲೇ ಸಿಎಂ ಬದಲಾವಣೆ ಪ್ರಸ್ತಾಪ, ಟೀಕೆ, ನೀರಾವರಿ ಇಲಾಖೆ ಟೆಂಡರ್ ನಲ್ಲಿ ಅಕ್ರಮ ನಡೆದಿದೆ ಎಂದು ವಿಶ್ವನಾಥ್ ಬಾಂಬ್ ಸಿಡಿಸಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಹೇಳಿಕೆ ನೀಡಿದ ನಂತರ ಯಡಿಯೂರಪ್ಪ ಬೆಂಬಲಿಗರು ಅವರ ಮೇಲೆ ಮುಗಿಬಿದ್ದಿದ್ದಾರೆ. ಆದರೆ ಇದಕ್ಕೆ ತಲೆಕೆಡಿಸಿಕೊಳ್ಳದ ವಿಶ್ವನಾಥ್ ಅವರು ತಮ್ಮದೇ ಧಾಟಿಯಲ್ಲಿ ತಿರುಗೇಟು ನೀಡಿದ್ದಾರೆ.

ನಾಯಕತ್ವ ಬದಲಾವಣೆ ಬಗ್ಗೆ ಧ್ವನಿ ಎತ್ತಿದವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕೆಂಬ ಒತ್ತಡ ಸಿಎಂ ಬೆಂಬಲಿಗರಿಂದ ಕೇಳಿಬಂದಿದ್ದು, ಉಸ್ತುವಾರಿ ಅರುಣ್ ಸಿಂಗ್ ಅವರಿಗೆ ದೂರು ನೀಡಲಾಗಿದೆ. ಅರುಣ್ ಸಿಂಗ್ ರಾಜ್ಯದ ಬೆಳವಣಿಗೆಗಳ ಬಗ್ಗೆ ವರಿಷ್ಠರಿಗೆ ವರದಿ ನೀಡಿದ ನಂತರ ಮುಂದಿನ ಕ್ರಮ ಕೈಗೊಳ್ಳಬಹುದು. ಆದರೆ, ಒಂದೇ ಸಲಕ್ಕೆ ಎಲ್ಲವೂ ಆಗದ ಮಾತು. ನಾಯಕತ್ವ ಬದಲಾವಣೆ ಬಗ್ಗೆ ಪ್ರಸ್ತಾಪಿಸಿದವರ ಹಿಂದೆಯೂ ಪ್ರಬಲ ನಾಯಕರಿದ್ದಾರೆ ಎನ್ನಲಾಗಿದ್ದು, ಶಿಸ್ತು ಕ್ರಮ ಕೈಗೊಳ್ಳುವ ಸಾಧ್ಯತೆ ಇಲ್ಲವಾಗಿದೆ. ಒಟ್ಟಿನಲ್ಲಿ ಬಿಜೆಪಿಯಲ್ಲಿನ ಬೆಳವಣಿಗೆ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...