ಮಡಿಕೇರಿ: ಹಾವೇರಿಯಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮುಸ್ಲಿಮರನ್ನು ಕಡೆಗಣಿಸಲಾಗಿದೆ ಎಂದು ಮಡಿಕೇರಿಯಲ್ಲಿ ಬಿಜೆಪಿ ವಿಧಾನಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಆರೋಪಿಸಿದ್ದಾರೆ.
ಹಾವೇರಿಯಲ್ಲಿ ನಡೆಯುವ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮುಸ್ಲಿಮರು, ದಲಿತರನ್ನು ತಡೆಗಣಿಸಲಾಗಿದೆ ಎಂದು ಆರೋಪಿಸಿದ್ದಾರೆ. ದಿಕ್ಕು ದೆಸೆ ಇಲ್ಲದೆ ಇಲ್ಲದ ಡೋಂಗಿ ಸಾಹಿತ್ಯ ಸಮ್ಮೇಳನ ಧಿಕ್ಕರಿಸುತ್ತೇನೆ. ಸಮ್ಮೇಳನಕ್ಕೆ ಸರ್ಕಾರ 20 ಕೋಟಿ ಬಿಡುಗಡೆ ಮಾಡಿದೆ. ಹಣ ಕೊಟ್ಟು ಸಭೆ ಮಾಡದೆ ಮೌನವಾಗಿರುವುದು ಸರಿಯಲ್ಲ. ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮುಖ್ಯಮಂತ್ರಿ, ಸಚಿವರ ಜವಾಬ್ದಾರಿ ಏನು? ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 85 ಸಾಧಕರಿಗೆ ಸನ್ಮಾನ ಇದೆ. ಮುಸ್ಲಿಮರನ್ನು, ದಲಿತರನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿದ್ದಾರೆ.