alex Certify ಪೊಲೀಸರಿಂದ ಹಿರಿಯ ಸಾಹಿತಿ ಹಂಪನಾ ವಿಚಾರಣೆ: ಸಿದ್ದರಾಮಯ್ಯ ಆಕ್ರೋಶ, ತನಿಖೆಗೆ ಮಂಡ್ಯ ಎಸ್ಪಿ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೊಲೀಸರಿಂದ ಹಿರಿಯ ಸಾಹಿತಿ ಹಂಪನಾ ವಿಚಾರಣೆ: ಸಿದ್ದರಾಮಯ್ಯ ಆಕ್ರೋಶ, ತನಿಖೆಗೆ ಮಂಡ್ಯ ಎಸ್ಪಿ ಆದೇಶ

ಬೆಂಗಳೂರು: ಹಿರಿಯ ಸಾಹಿತಿ ಹಂ.ಪ. ನಾಗರಾಜಯ್ಯ ಅವರನ್ನು ಪೊಲೀಸ್ ಠಾಣೆಗೆ ಕರೆಸಿ ವಿಚಾರಣೆ ನಡೆಸಿರುವ ಪೊಲೀಸರ ಕೃತ್ಯವನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಖಂಡಿಸಿದ್ದಾರೆ.

ಬಿಜೆಪಿ ಸರ್ಕಾರವನ್ನು ಆಕ್ಷೇಪಾರ್ಹ ಮಾತುಗಳಿಂದ ಟೀಕಿಸಿದ ಆರೋಪದ ಮೇಲೆ ಸಾಹಿತಿ ಹಂ.ಪ. ನಾಗರಾಜಯ್ಯ ಅವರನ್ನು ಮಂಡ್ಯ ನಗರದ ಪಶ್ಚಿಮ ಠಾಣೆ ಪೊಲೀಸರು ಗುರುವಾರ ಠಾಣೆಗೆ ಕರೆಸಿ ವಿಚಾರಣೆ ನಡೆಸಿದ್ದಾರೆ.

ಇದನ್ನು ತೀವ್ರವಾಗಿ ಖಂಡಿಸಿರುವ ಸಿದ್ದರಾಮಯ್ಯ, ಬಿಜೆಪಿ ತಮ್ಮದು ದುರ್ಯೋಧನನ ಸರ್ಕಾರ ಎಂದು ಸಾಬೀತುಪಡಿಸಿದೆ. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಲು ಹೊರಟಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಗೋಮುಖ ವ್ಯಾಘ್ರ ಮುಖ ಬಯಲಾಗಿದೆ ಎಂದು ಟೀಕಿಸಿದ್ದಾರೆ.

ಇನ್ನೂ ಸಾಹಿತಿ ಹಂ.ಪ. ನಾಗರಾಜಯ್ಯ ಅವರನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಿರುವುದಕ್ಕೆ ಮಂಡ್ಯ ಪೊಲೀಸ್ ಅಧೀಕ್ಷಕ ಕೆ. ಪರಶುರಾಮ್ ವಿಷಾದ ವ್ಯಕ್ತಪಡಿಸಿದ್ದಾರೆ.

ಹಂಪನಾ ಅವರು ಖ್ಯಾತ ಸಾಹಿತಿಗಳು ಹಾಗೂ ಹಿರಿಯ ನಾಗರಿಕರಾಗಿದ್ದು, ಅವರು ಪೊಲೀಸ್ ಠಾಣೆಗೆ ಬಂದು ಹೇಳಿಕೆ ನೀಡುವ ಸನ್ನಿವೇಶ ಉದ್ಭವಿಸಿದ ಬಗ್ಗೆ ವಿಷಾದ ವ್ಯಕ್ತಪಡಿಸಲಾಗಿದೆ. ಘಟನೆಯ ಬಗ್ಗೆ ವಿಚಾರಣೆ ನಡೆಸಿ ವರದಿ ಸಲ್ಲಿಸುವಂತೆ ಮಂಡ್ಯ ಉಪವಿಭಾಗದ ಡಿಎಸ್ಪಿ ಅವರಿಗೆ ಸೂಚನೆ ನೀಡಲಾಗಿದೆ. ವರದಿ ಆಧರಿಸಿ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಪರಶುರಾಮ್ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...