ಹಾಸನ: ಎಸ್ ಡಿಎ ಮಹಿಳಾ ಅಧಿಕಾರಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯ ರಕ್ಷಣಾಪುರಂ ನಲ್ಲಿ ನಡೆದಿದೆ.
31 ವರ್ಷದ ಸುಚಿತ್ರಾ ಮೃತ ಮಹಿಳೆ. ಹಾಸನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗ್ರಾಮ್ ಒನ್ ಕೇಂದ್ರದಲ್ಲಿ ಎಸ್ ಡಿಎ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.
ಸುಚಿತ್ರಾ ಅವರ ಪತಿ ಅಪಘಾತದಲ್ಲಿ ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಪತಿಯ ಹುದ್ದೆಯನ್ನು ಪತ್ನಿಗೆ ನೀಡಲಾಗಿತ್ತು. ಆದರೆ ಈಗ ಏಕಾಏಕಿ ರಕ್ಷಣಾಪುರಂ ಬಡಾವಣೆಯ ಮನೆಯಲ್ಲಿ ನೇಣಿಗೆ ಕೊರಳೊಡ್ಡಿದ್ದಾರೆ.
ಎಸ್ ಡಿಎ ಅಧಿಕಾರಿ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಬಡಾವಣೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.