ವಾರಾಂತ್ಯದ ದಿನಗಳಲ್ಲಿ ಪ್ರವಾಸಿಗರಿಗೆ ನಂದಿ ಬೆಟ್ಟ ಅಚ್ಚುಮೆಚ್ಚಿನ ಸ್ಥಳ. ಆದರೆ ಕೆಲವೊಂದು ಅಗತ್ಯ ಮೂಲಭೂತ ಸೌಕರ್ಯಗಳಿಲ್ಲದ ಕಾರಣ ಪ್ರವಾಸಿಗರಿಗೆ ತೊಂದರೆಯಾಗಿತ್ತು.
ಇದೀಗ ‘ಹ್ಯಾಬಿಟ್ಯಾಟ್ ಫಾರ್ ಹ್ಯೂಮಾನಿಟಿ’ ಸಂಸ್ಥೆ ನಂದಿಬೆಟ್ಟದಲ್ಲಿ ಶೌಚಾಲಯ ನಿರ್ಮಿಸುವುದರ ಜೊತೆಗೆ ಪ್ಲಾಸ್ಟಿಕ್ ಬಾಟಲಿ ಪುಡಿ ಮಾಡುವ ಯಂತ್ರವನ್ನು ಅಳವಡಿಸಿದೆ. ಈ ಯಂತ್ರದ ಅಳವಡಿಕೆ ಕಾರಣಕ್ಕೆ ಪ್ರವಾಸಿಗರು ಎಲ್ಲೆಂದರಲ್ಲಿ ಪ್ಲಾಸ್ಟಿಕ್ ಬಾಟಲಿ ಬಿಸಾಡುವುದಕ್ಕೆ ಕಡಿವಾಣ ಬೀಳಲಿದೆ.
ಈ ಮೊದಲು ಪ್ರವಾಸಿಗರು ಪ್ಲಾಸ್ಟಿಕ್ ಬಾಟಲಿಯನ್ನು ಎಲ್ಲೆಂದರಲ್ಲಿ ಬಿಸಾಡುತ್ತಿದ್ದ ಕಾರಣಕ್ಕೆ ಮಾಲಿನ್ಯ ಉಂಟಾಗುತ್ತಿತ್ತು. ಹೀಗಾಗಿ ಮಾಜಿ ಸಚಿವ ಡಾ. ಕೆ. ಸುಧಾಕರ್ ಸಂಸ್ಥೆಗೆ ಸಲಹೆ ನೀಡಿದ್ದು, ಇದಕ್ಕೆ ಸ್ಪಂದಿಸಿ ಈ ಕಾರ್ಯವನ್ನು ಮಾಡಲಾಗಿದೆ. ಸುಧಾಕರ್ ಅವರು ಸಾಮಾಜಿಕ ಜಾಲತಾಣದಲ್ಲಿ ಈ ವಿಚಾರವನ್ನು ಹಂಚಿಕೊಂಡಿದ್ದಾರೆ.