ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆ.ಎಸ್.ಆರ್.ಟಿ.ಸಿ.) ಅಧಿಕೃತ ಫೇಸ್ಬುಕ್ ಖಾತೆಯನ್ನು ಇತ್ತೀಚಿಗೆ ಕಿಡಿಗೇಡಿಗಳು ಹ್ಯಾಕ್ ಮಾಡಿದ ಸಂಗತಿ ಬೆಳಕಿಗೆ ಬಂದಿದ್ದು, ಕೇಂದ್ರ ವಿಭಾಗದ ಸಿಇಎನ್ ಠಾಣೆಗೆ ದೂರು ನೀಡಲಾಗಿದೆ.
ಕೆ.ಎಸ್.ಆರ್.ಟಿ.ಸಿ. ಕೇಂದ್ರ ಅಧಿಕಾರಿ ಡಿ.ಎಂ. ಮಂಜುನಾಥ್ ಅವರು ದೂರು ನೀಡಿದ್ದಾರೆ. ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಕೆಲವು ದಿನಗಳ ಹಿಂದೆ ಕೆಎಸ್ಆರ್ಟಿಸಿ ಫೇಸ್ ಬುಕ್ ನಲ್ಲಿರುವ https://www.Facebook.com/KSRTC,Karnataka ಖಾತೆಯನ್ನು ಕಿಡಿಗೇಡಿಗಳು ಹ್ಯಾಕ್ ಮಾಡಿದ್ದಾರೆ. ನಂತರ ಸಂಸ್ಥೆಯ gmail ಐಡಿಯನ್ನು ಬದಲಾವಣೆ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಕೆ.ಎಸ್.ಆರ್.ಟಿ.ಸಿ. ಫೇಸ್ಬುಕ್ ಖಾತೆ ಹ್ಯಾಕ್ ಮಾಡಿದ ವಿಷಯ ಗೊತ್ತಾಗಿ ಅದನ್ನು ಕೂಡಲೇ ನಿರ್ಬಂಧಿಸಲಾಗಿದೆ.