
ಬಳ್ಳಾರಿ: ಶಾಸಕ ಭೀಮಾನಾಯ್ಕ್ ವರ್ತನೆ ಖಂಡಿಸಿ ನವೆಂಬರ್ 11 ರಂದು ಬಳ್ಳಾರಿ ಜಿಲ್ಲೆ ಹಗರಿಬೊಮ್ಮನಹಳ್ಳಿ ಪಟ್ಟಣ ಬಂದ್ ಮಾಡಲು ತೀರ್ಮಾನಿಸಲಾಗಿದೆ.
ನವೆಂಬರ್ 11 ರಂದು ಬಿಜೆಪಿ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ. ಬಂದ್ ಗೆ ಎಲ್ಲರೂ ಸಹಕಾರ ನೀಡಬೇಕೆಂದು ಹಗರಿಬೊಮ್ಮನಹಳ್ಳಿ ಮಾಜಿ ಶಾಸಕ ನೇಮಿರಾಜ್ ಮನವಿ ಮಾಡಿದ್ದಾರೆ.
ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಸಂದರ್ಭದಲ್ಲಿ ಶಾಸಕ ಭೀಮಾನಾಯ್ಕ್ ತೋಳು ತಟ್ಟಿ ಬಿಜೆಪಿ ಕಾರ್ಯಕರ್ತರ ಮೇಲೆರಗಿ ಹೋಗಲು ಮುಂದಾಗಿದ್ದರು. ಇದನ್ನು ವಿರೋಧಿಸಿ ಬಂದ್ ಗೆ ಕರೆ ನೀಡಲಾಗಿದೆ ಎಂದು ಹೇಳಲಾಗಿದೆ.