ಅವಿನಾಶ್ ಎನ್ ನಿರ್ದೇಶನದ ಬಹು ನಿರೀಕ್ಷಿತ ‘ಹಗ್ಗ’ ಚಿತ್ರ ಈಗಾಗಲೇ ತನ್ನ ಟೈಟಲ್ ಮತ್ತು ಮೋಷನ್ ಪೋಸ್ಟರ್ ಮೂಲಕವೇ ಭರ್ಜರಿ ಸೌಂಡ್ ಮಾಡಿದ್ದು, ಪ್ರೇಕ್ಷಕರಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ. ಇದರ ಲಿರಿಕಲ್ ಹಾಡು ನಿನ್ನೆಯಷ್ಟೇ ಯೂಟ್ಯೂಬ್ ನಲ್ಲಿ ರಿಲೀಸ್ ಆಗಿದೆ. ‘ಹಾವಳಿ ಹಾಕಿದೆ’ ಎಂಬ ಈ ಹಾಡಿಗೆ ಸೋನು ನಿಗಮ್ ಧ್ವನಿಯಾಗಿದ್ದು, ಮ್ಯಾಥ್ಯೂಸ್ ಮನು ಸಂಗೀತ ಸಂಯೋಜನೆ ನೀಡಿದ್ದಾರೆ. ಇನ್ನುಳಿದಂತೆ ಯೋಗರಾಜ್ ಭಟ್ ಸಾಹಿತ್ಯವಿದೆ.
ಈ ಚಿತ್ರವನ್ನು ವಸಂತ ಸಿನಿ ಕ್ರಿಯೇಶನ್ಸ್ ಬ್ಯಾನರ್ ನಡಿ ರಾಜ್ ಭಾರದ್ವಾಜ್ ನಿರ್ಮಾಣ ಮಾಡಿದ್ದು, ಅನುಪ್ರಭಾಕರ್, ವೇಣು, ಹರ್ಷಿಕಾ ಪೂಣಚ್ಚ, ಸೇರಿದಂತೆ ತಬಲಾ ನಾಣಿ, ಅವಿನಾಶ್, ಭವಾನಿ ಪ್ರಕಾಶ್, ಸುಧಾಬೆಳವಾಡಿ, ಪ್ರಿಯಾ ಹೆಗ್ಡೆ, ಮೈಚೋ ಮಂಜು, ಸಂಜು ಬಸಯ್ಯ, ಸದಾನಂದ ಕಾಳಿ ಬಣ್ಣ ಹಚ್ಚಿದ್ದಾರೆ. ಎನ್ಎಂ ವಿಶ್ವಾ ಸಂಕಲನ, ಮನೋಹರ್ ಎಸ್ಪಿ ಸಂಭಾಷಣೆ, ಹಾಗೂ ಸಿನಿ ಟೆಕ್ ಸೂರಿ ಛಾಯಾಗ್ರಹಣವಿದೆ.