ಬೀದರ್: ಪ್ರತಿ ತಿಂಗಳು ಮೂರು ಜಿಲ್ಲೆಗಳಲ್ಲಿ ವಕ್ಫ್ ಅದಾಲತ್ ನಡೆಸಲಾಗುವುದು. ಕಲಬುರಗಿ, ಮಂಗಳೂರು ಸೇರಿ ರಾಜ್ಯದ ನಾಲ್ಕು ಕಡೆ ಹಜ್ ಭವನ ನಿರ್ಮಾಣ ಮಾಡಲಾಗುವುದು ಎಂದು ವಕ್ಪ್ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.
ಸೋಮವಾರ ಬೀದರ್ ನ ಪಟೇಲ್ ಫಂಕ್ಷನ್ ಹಾಲ್ ನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಅದಾಲತ್ ಉದ್ಘಾಟಿಸಿ ಅವರು ಮಾತನಾಡಿದರು.
ಜಮೀನು ಅತಿಕ್ರಮಣ ಮತ್ತು ಖಾತಾ ಸೇರಿ ಇತರೆ ವಿಷಯಗಳು ಬಗ್ಗೆ ಸಾರ್ವಜನಿಕರ ಅಹವಾಲು ಸ್ವೀಕರಿಸಿ ಅವರ ಸಮಸ್ಯೆ ತಿಳಿದುಕೊಂಡು ಪರಿಹಾರ ನೀಡಲು ಪ್ರತಿ ತಿಂಗಳು ಮೂರು ಜಿಲ್ಲೆಗಳಲ್ಲಿ ವಕ್ಫ್ ಅದಾಲತ್ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ರಾಜ್ಯದ ಕಲಬುರಗಿ, ಮಂಗಳೂರು ಸೇರಿ 4 ಸ್ಥಳಗಳಲ್ಲಿ ಹಜ್ ಭವನ ನಿರ್ಮಾಣ ಮಾಡಲಾಗುವುದು. ವಕ್ಪ್ ಆಸ್ತಿ ಒತ್ತುವರಿಗೆ ಅವಕಾಶ ನೀಡುವುದಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಆದ್ಯತೆ ಮೇಲೆ ಪರಿಗಣಿಸಿ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುವುದು ಎಂದು ತಿಳಿಸಿದ್ದಾರೆ.