ಉಡುಪಿ: ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸದಿರಲು ಕುಂದಾಪುರ ಬಿಜೆಪಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ತೀರ್ಮಾನ ಕೈಗೊಂಡಿದ್ದಾರೆ.
ಕುಂದಾಪುರ ಕ್ಷೇತ್ರದ ಜನರು ನನ್ನನ್ನು ಐದು ಬಾರಿ ಆಯ್ಕೆ ಮಾಡಿದ್ದಾರೆ. ಕುಂದಾಪುರ ಶಾಸಕನಾಗಿ ನಿಷ್ಠೆ ಮತ್ತು ಪ್ರೀತಿಯಿಂದ ಕೆಲಸ ಮಾಡಿದ್ದೇನೆ. ಪ್ರಸಕ್ತ ಚುನಾವಣೆಯಲ್ಲಿ ಸ್ವ ಇಚ್ಛೆಯಿಂದ ಸ್ಪರ್ಧಿಸದಿರಲು ನಿರ್ಧಾರ ಕೈಗೊಂಡಿದ್ದೇನೆ. ಐದು ಬಾರಿ ದಾಖಲೆಯ ಮತಗಳಿಂದ ಗೆಲ್ಲಿಸಿದ್ದಕ್ಕೆ ಎಲ್ಲರಿಗೂ ಧನ್ಯವಾದಗಳು ಎಂದು ತಿಳಿಸಿದ್ದಾರೆ.
ನಾಲ್ಕು ಬಾರಿ ಕುಂದಾಪುರದ ಟಿಕೆಟ್ ನೀಡಿದ ಬಿಜೆಪಿಗೆ ಧನ್ಯವಾದ ಹೇಳುತ್ತೇನೆ. ಪಕ್ಷದ ನಾಯಕರು, ಕಾರ್ಯಕರ್ತರು, ಅಭಿಮಾನಿಗಳಿಗೆ ಚಿರಋಣಿಯಾಗಿದ್ದೇನೆ. ಕುಂದಾಪುರ ಕ್ಷೇತ್ರದ ಮತದಾರರು ಬಿಜೆಪಿ ಅಭ್ಯರ್ಥಿಗೆ ಮತ ನೀಡಿ ಎಂದು ಮನವಿ ಮಾಡಿದ್ದಾರೆ.