ಬೆಳಗಾವಿ(ಸುವರ್ಣಸೌಧ): ರಾಜ್ಯದಲ್ಲಿ ಶೀಘ್ರವೇ 4244 ಅಂಗನವಾಡಿ ಕೇಂದ್ರಗಳನ್ನು ಆರಂಭಿಸಲು ಆಡಳಿತಾತ್ಮಕ ಮಂಜೂರಾತಿ ನೀಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಹಾಲಪ್ಪ ಆಚಾರ್ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಆನಂದ್ ನ್ಯಾಮಗೌಡ ವಿಷಯ ಪ್ರಸ್ತಾಪಿಸಿದ್ದು, ಇದಕ್ಕೆ ಉತ್ತರ ನೀಡಿದ ಸಚಿವರು, ಹೊಸದಾಗಿ 4244 ಅಂಗನವಾಡಿ ಕೇಂದ್ರ ಆರಂಭಿಸಲು ಆಡಳಿತಾತ್ಮಕ ಮಂಜೂರಾತಿ ನೀಡಿದ್ದು, ಶೀಘ್ರವೇ ಆರಂಭಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಕಡಿಮೆ ಆದಾಯ ಹೊಂದಿರುವ ಜನಸಂಖ್ಯೆ ಹೆಚ್ಚಿರುವ ಪ್ರದೇಶಗಳಲ್ಲಿ, ವಲಸೆ ಮತ್ತು ಭೂ ರಹಿತ ಕಾರ್ಮಿಕರನ್ನು ಹೊಂದಿರುವ ಗ್ರಾಮಾಂತರ ಪ್ರದೇಶದಲ್ಲಿ 1655, ನಗರ ವ್ಯಾಪ್ತಿಯಲ್ಲಿ 2589 ಅಂಗನವಾಡಿ ಕೇಂದ್ರಗಳನ್ನು ಆರಂಭಿಸಲಾಗುವುದು. ಶಾಲಾ ಕಟ್ಟಡ, ಸಮುದಾಯ ಭವನ, ಸಂಘ ಸಂಸ್ಥೆಗಳ ಜಾಗಗಳಿದ್ದರೆ ಅವುಗಳನ್ನು ಬಳಸಿಕೊಂಡು ಅಂಗನವಾಡಿ ಆರಂಭಿಸಲಾಗುವುದು ಎಂದು ಹೇಳಿದ್ದಾರೆ.