ಬೆಂಗಳೂರು: ಭಾಗ್ಯಲಕ್ಷ್ಮಿ ಯೋಜನೆಯ ಅರ್ಹ ಫಲಾನುಭವಿಗಳ ಶೀಘ್ರವೇ ಸೌಲಭ್ಯ ಒದಗಿಸಲಾಗುವುದು ಎಂದು ಸಚಿವ ಹಾಲಪ್ಪ ಆಚಾರ್ ತಿಳಿಸಿದ್ದಾರೆ.
ಬಿಜೆಪಿ ಸದಸ್ಯ ಮಸಾಲೆ ಜಯರಾಮ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಭಾಗ್ಯಲಕ್ಷ್ಮಿ ಯೋಜನೆಯಡಿ ಬಾಕಿ ಉಳಿದ ಎಲ್ಲ ಅರ್ಜಿಗಳಿಗೆ ಸೌಲಭ್ಯ ನೀಡಲಾಗುವುದು. ಎಲ್ಐಸಿ ಬದಲಿಗೆ ಅಂಚೆ ಇಲಾಖೆಯ ಮೂಲಕ ಭಾಗ್ಯಲಕ್ಷ್ಮಿ ಯೋಜನೆ ಸೌಲಭ್ಯ ಮುಂದುವರಿಸಲಾಗಿದೆ. ಎಲ್ಲ ಅರ್ಹರಿಗೆ ಸೌಲಭ್ಯ ಕಲ್ಪಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.