ಬೆಳಗಾವಿ: ಪೌಷ್ಟಿಕಾಂಶ ಒದಗಿಸುವ ಉದ್ದೇಶದಿಂದ ಶಾಲೆಯಲ್ಲಿ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು, ಚಿಕ್ಕಿ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ.
ಆದರೆ, ವಿತರಣೆಗೆ ವಿರೋಧ ವ್ಯಕ್ತವಾಗಿದೆ. ಮೊಟ್ಟೆ ವಿತರಣೆ ನಿಲ್ಲಿಸಬಾರದು ಎಂಬ ಒತ್ತಾಯವೂ ಇದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಹಾಲಪ್ಪ ಆಚಾರ್ ಅವರು, ಪೋಷಕಾಂಶ ಒಳಗೊಂಡಿರುವ ಕಾರಣಕ್ಕೆ ಮಕ್ಕಳಿಗೆ ಮೊಟ್ಟೆ ನೀಡಲಾಗುತ್ತಿದೆ. ಮೊಟ್ಟೆ ತಿನ್ನದ ಮಕ್ಕಳಿಗೆ ಹಾಲು ಕೊಡಲಾಗುವುದು ಎಂದು ತಿಳಿಸಿದ್ದಾರೆ.
ಮೊಟ್ಟೆ ವಿತರಣೆಯನ್ನು ನಿಲ್ಲಿಸುವುದಿಲ್ಲ. ತಜ್ಞರು ನೀಡಿದ ಶಿಫಾರಸಿನ ಅನ್ವಯ ಮಕ್ಕಳಿಗೆ ಮೊಟ್ಟೆ ವಿತರಿಸಲಾಗುತ್ತಿದೆ. ತಜ್ಞರು ನೀಡಿರುವ ಸಲಹೆಯಂತೆ ಎರಡು ಗಂಟೆಕಾಲ ಅಂಗನವಾಡಿ ಕೇಂದ್ರಗಳನ್ನು ನಡೆಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಅವಧಿ ಹೆಚ್ಚಳ ಮಾಡುವ ಬಗ್ಗೆ ತಜ್ಞರ ಮಾಹಿತಿ ಆಧರಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದಿದ್ದಾರೆ.