alex Certify ಗರ್ಭಿಣಿಯರು, ಬಾಣಂತಿಯರಿಗೆ ಗುಡ್ ನ್ಯೂಸ್: ಮನೆಗೇ ‘ಮಾತೃಪೂರ್ಣ’ ಸೌಲಭ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗರ್ಭಿಣಿಯರು, ಬಾಣಂತಿಯರಿಗೆ ಗುಡ್ ನ್ಯೂಸ್: ಮನೆಗೇ ‘ಮಾತೃಪೂರ್ಣ’ ಸೌಲಭ್ಯ

ಬೆಂಗಳೂರು: ಗರ್ಭಿಣಿಯರು, ಬಾಣಂತಿಯರಿಗೆ ಮಧ್ಯಾಹ್ನದ ಪೌಷ್ಟಿಕ ಬಿಸಿಯೂಟ ನೀಡುವ ಮಾತೃಪೂರ್ಣ ಯೋಜನೆ ಸೌಲಭ್ಯವನ್ನು ಮನೆಗೆ ತಲುಪಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಹಾಲಪ್ಪ ಆಚಾರ್ ತಿಳಿಸಿದ್ದಾರೆ.

ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯ ಮಂಜುನಾಥ ಭಂಡಾರಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ವರ್ಷದ ಮಳೆಗಾಲ ಮುಗಿಯುವವರೆಗೆ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಫಲಾನುಭವಿಗಳ ಮನವಿ ಮೇರೆಗೆ ಅವರ ಮನೆಗೆ ಆಹಾರ ಪದಾರ್ಥಗಳನ್ನು ತೆಗೆದುಕೊಂಡು ಹೋಗಲು ಅವಕಾಶ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಮಾತೃಪೂರ್ಣ ಯೋಜನೆಯಡಿ 8 ತಿಂಗಳು ತುಂಬಿದ ಗರ್ಭಿಣಿಯರಿಗೆ, ಹೆರಿಗೆಯಾದ 45 ದಿನಗಳವರೆಗೆ ಬಾಣಂತಿಯರಿಗೆ ಬಿಸಿಯೂಟವನ್ನು ಮನೆಗೆ ನೀಡಲು ಅವಕಾಶ ಕಲ್ಪಿಸಲಾಗಿದೆ. ಕಾರಣಾಂತರದಿಂದ ಅಂಗನವಾಡಿ ಕೇಂದ್ರಕ್ಕೆ ಬರಲು ಸಾಧ್ಯವಾಗದವರಿಗೆ ಅವರ ಮನೆಯ ಸದಸ್ಯರ ಮೂಲಕ ಬಿಸಿಯೂಟ ತೆಗೆದುಕೊಂಡು ಹೋಗಲು ಸಹ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...