alex Certify BREAKING NEWS: ಹಂಪಿ ಉತ್ಸವದ ಮುಖ್ಯ ವೇದಿಕೆ ಬಳಿ ಬೆಂಕಿ ಅವಘಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಹಂಪಿ ಉತ್ಸವದ ಮುಖ್ಯ ವೇದಿಕೆ ಬಳಿ ಬೆಂಕಿ ಅವಘಡ

ವಿಜಯನಗರ: ವಿಶ್ವ ವಿಖ್ಯಾತ ಹಂಪಿ ಉತ್ಸವ ಅದ್ಧೂರಿಯಾಗಿ ನಡೆಯುತ್ತಿದ್ದು, ಈ ವೇಳೆ ಬೆಂಕಿ ಅವಘಡ ಸಂಭವಿಸಿದೆ. ಹಂಪಿ ಉತ್ಸವದ ಮುಖ್ಯ ವೇದಿಕೆಯ ಹಿಂಭಾಗ ಬೆಂಕಿ ಬಿದ್ದಿದ್ದು, ತಕ್ಷಣ ಅಗ್ನಿಶಾಮಕ ಸಿಬ್ಬಂದಿ ಸಮಯ ಪ್ರಜ್ಞೆ ಮೆರೆದಿದ್ದಾರೆ.

ಹೊಸಪೇಟೆ ತಾಲೂಕಿನ ಹಂಪಿಯಲ್ಲಿ ನಡೆಯುತ್ತಿರುವ ಉತ್ಸವದ ಮುಖ್ಯ ವೇದಿಕೆ ಗಾಯತ್ರಿ ಪೀಠದ ಪಕ್ಕದಲ್ಲಿದ್ದ ಬಿದರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಯಾರೋ ಸಿಗರೇಟ್ ಸೇದಿ ಎಸೆದಿರುವ ಕಾರಣ ಒಣಗಿದ ಬಿದರಿಗೆ ಬೆಂಕಿ ಹೊತ್ತಿಕೊಂಡಿದೆ.

ತಕ್ಷಣ ಅಗ್ನಿಶಾಮಕ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸಿದ್ದಾರೆ. ಯಾವುದೇ ಅನಾಹುತ ಸಂಭವಿಸಿಲ್ಲ. ಅಗ್ನಿಶಾಮ ಸಿಬ್ಬಂದಿಗಳ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...