ಬೆಂಗಳೂರು: ಪೇಜಾವರ ಸ್ವಾಮೀಜಿಯವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಸಂಗೀತ ನಿರ್ದೇಶಕ ಹಂಸಲೇಖ ಅವರ ವಿರುದ್ಧ ಅಖಿಲ ಕರ್ನಾಟಕ ಬ್ರಾಹ್ಮಣ ವೇದಿಕೆ, ವಿಪ್ರ ವೇದಿಕೆ ಸೇರಿದಂತೆ ಹಲವು ಬ್ರಾಹ್ಮಣ ಸಂಘಟನೆಗಳಿಂದ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಲಾಗಿದೆ.
ಈಗಾಗಲೇ ಹಂಸಲೇಖ ಅವರು ಕ್ಷಮೆ ಕೇಳಿದ್ದು, ಅವರ ವಿರುದ್ಧ ಬೆಂಗಳೂರಿನ ಹನುಮಂತನಗರ ಠಾಣೆ ಪೊಲೀಸರಿಗೆ ದೂರು ನೀಡಲಾಗಿದೆ. ಈಗ ವಿಪ್ರ ಸಂಘಟನೆಗಳಿಂದಲೂ ಪೊಲೀಸ್ ಆಯುಕ್ತರಿಗೆ ದೂರು ನೀಡಲಾಗಿದೆ. ಶ್ರೀಗಳ ಬೃಂದಾವನದಲ್ಲಿ ಹಂಸಲೇಖ ಬಹಿರಂಗವಾಗಿ ಕ್ಷಮೆ ಕೇಳಬೇಕು. ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪದಡಿಯಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಲಾಗಿದೆ.
ಮೈಸೂರಿನಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಹಂಸಲೇಖ ಅವರು, ಪೇಜಾವರ ಶ್ರೀಗಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದು ಭಾರೀ ಆಕ್ರೋಶ ವ್ಯಕ್ತವಾಗಿತ್ತು. ನಂತರದಲ್ಲಿ ಹಂಸಲೇಖ ಕ್ಷಮೆ ಕೇಳಿದ್ದರೂ, ಆಕ್ರೋಶ ಮುಂದುವರೆದಿದೆ.