alex Certify BIG BREAKING: BSY, ಬೆಂಬಲಿಗರ ಒತ್ತಡಕ್ಕೆ ಮಣಿದ ಬಿಜೆಪಿ ನಾಯಕರು…? ವಿಜಯೇಂದ್ರಗೆ ಹಾನಗಲ್ ಉಸ್ತುವಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: BSY, ಬೆಂಬಲಿಗರ ಒತ್ತಡಕ್ಕೆ ಮಣಿದ ಬಿಜೆಪಿ ನಾಯಕರು…? ವಿಜಯೇಂದ್ರಗೆ ಹಾನಗಲ್ ಉಸ್ತುವಾರಿ

ಬೆಂಗಳೂರು: ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಉಸ್ತುವಾರಿಯಾಗಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ನೇಮಕ ಮಾಡಲಾಗಿದೆ.

ಉಸ್ತುವಾರಿಗಳ ಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದ್ದು, ವಿಜಯೇಂದ್ರ ಅವರಿಗೆ ಹಾನಗಲ್ ಉಸ್ತುವಾರಿ ನೀಡಲಾಗಿದೆ. ಸಿಂದಗಿ ಮತ್ತು ಹಾನಗಲ್ ವಿಧಾನಸಭಾ ಕ್ಷೇತ್ರಗಳಿಗೆ ಬಿಜೆಪಿ ಉಸ್ತುವಾರಿಗಳನ್ನು ನಿಯೋಜಿಸಿದ್ದು, ವಿಜಯೇಂದ್ರ ಅವರನ್ನು ಹೊರಗಿಡಲಾಗಿತ್ತು.

ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ನಂತರ ವಿಜಯೇಂದ್ರ ಅವರನ್ನು ದೂರ ಇಟ್ಟಿರುವ ಬಗ್ಗೆ ವಿಜಯೇಂದ್ರ ಬೆಂಬಲಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.

ಉಪಚುನಾವಣೆ ಗೆಲುವಿನ ರೂವಾರಿ ಎಂದೇ ಹೇಳಲಾಗುತ್ತಿದ್ದ ಹಿಂದೆ ಹಲವು ಉಪಚುನಾವಣೆಗಳಲ್ಲಿ ಬಿಜೆಪಿ ಗೆಲ್ಲದ ಕ್ಷೇತ್ರಗಳಲ್ಲೂ ಗೆಲುವಿಗೆ ಕಾರಣರಾಗಿದ್ದ ವಿಜಯೇಂದ್ರ ಅವರಿಗೆ ಈ ಬಾರಿ ಉಪಚುನಾವಣೆ ಜವಾಬ್ದಾರಿಯಿಂದ ಹೊರಗಿಟ್ಟಿರುವುದು ಅವರ ಬೆಂಬಲಿಗರಲ್ಲಿ ಆಕ್ರೋಶ ತಂದಿತ್ತು.

ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತವಾಗಿದ್ದು, ಬೆಂಬಲಿಗರ ಆಕ್ರೋಶಕ್ಕೆ ಮಣಿದ ಬಿಜೆಪಿ ನಾಯಕರು ವಿಜಯೇಂದ್ರ ಅವರಿಗೆ ಹಾನಗಲ್ ಚುನಾವಣೆ ಉಸ್ತುವಾರಿ ವಹಿಸಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...