
ಬೆಂಗಳೂರು: ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಸಿ ಹಾನಗಲ್ ಬಿಜೆಪಿ ಅಭ್ಯರ್ಥಿಗಳನ್ನು ಫೈನಲ್ ಮಾಡಲಾಗಿದ್ದು, ಮೂವರ ಹೆಸರುಗಳನ್ನು ಹೈಕಮಾಂಡ್ ಗೆ ಶಿಫಾರಸು ಮಾಡಲಾಗಿದೆ.
ರೇವತಿ ಸೇರಿದಂತೆ ಮೂವರ ಹೆಸರನ್ನು ಕಳಿಸಲಾಗಿದೆ. ಸಿದ್ದರಾಜ ಕಲಕೋಟಿ ಅವರ ಹೆಸರನ್ನು ಕೂಡ ಶಿಫಾರಸು ಮಾಡಲಾಗಿದೆ. ಸಂಸದ ಶಿವಕುಮಾರ ಉದಾಸಿ ಅವರ ಹೆಸರನ್ನು ಕೋರ್ ಕಮಿಟಿ ಸಭೆಯಲ್ಲಿ ಪರಿಗಣಿಸಲಾಗಿಲ್ಲ. ಸದ್ಯಕ್ಕೆ ಲೋಕಸಭೆ ಉಪಚುನಾವಣೆ ಬೇಡವೆನ್ನುವ ಕಾರಣಕ್ಕೆ ಅವರಿಗೆ ಟಿಕೆಟ್ ನೀಡದಿರಲು ತೀರ್ಮಾನಿಸಲಾಗಿದೆ ಎನ್ನಲಾಗಿದೆ.