alex Certify BREAKING : ಹಾನಗಲ್ ಗ್ಯಾಂಗ್ ರೇಪ್ ಪ್ರಕರಣ ‘SIT’ ತನಿಖೆಗೆ ನೀಡುವಂತೆ ಪಟ್ಟು : ಜ.20 ರಂದು ಹಾವೇರಿಯಲ್ಲಿ ‘ಬಿಜೆಪಿ’ ಪ್ರತಿಭಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಹಾನಗಲ್ ಗ್ಯಾಂಗ್ ರೇಪ್ ಪ್ರಕರಣ ‘SIT’ ತನಿಖೆಗೆ ನೀಡುವಂತೆ ಪಟ್ಟು : ಜ.20 ರಂದು ಹಾವೇರಿಯಲ್ಲಿ ‘ಬಿಜೆಪಿ’ ಪ್ರತಿಭಟನೆ

ಹಾವೇರಿ : ಹಾನಗಲ್ ಗ್ಯಾಂಗ್ ರೇಪ್ ಪ್ರಕರಣವನ್ನು ಎಸ್ ಐ ಟಿ ತನಿಖೆಗೆ ನೀಡುವಂತೆ ಬಿಜೆಪಿ ಪಟ್ಟು ಹಿಡಿದಿದ್ದು, ಜ.20 ರಂದು ಹಾವೇರಿಯಲ್ಲಿ ಬಿಜೆಪಿ ಪ್ರತಿಭಟನೆ ನಡೆಸಲಿದೆ.

ಹಾವೇರಿಯಲ್ಲಿ ಎಸ್ ಪಿ ಕಚೇರಿಯ ಮುಂದೆ ಮಾಜಿ ಸಿಎಂ ಬೊಮ್ಮಾಯಿ, ವಿಪಕ್ಷ ನಾಯಕ ಆರ್ ಅಶೋಕ್ ನೇತೃತ್ವದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಲಿದೆ. ಹಾನಗಲ್ ಗ್ಯಾಂಗ್ ರೇಪ್ ಪ್ರಕರಣವನ್ನು ಎಸ್ ಐ ಟಿ ತನಿಖೆಗೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಿದೆ ಎಂದು ತಿಳಿದು ಬಂದಿದೆ.

ಹಾವೇರಿ ಜಿಲ್ಲೆಯ ಹಾನಗಲ್ ನಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣವನ್ನು ಎಸ್ ಐ ಟಿ ತನಿಖೆಗೆ ನೀಡುವಂತೆ ಬಿಜೆಪಿ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾವೇರಿ ಅತ್ಯಾಚಾರ ಪ್ರಕರಣದ ತನಿಖೆ ನಡೆಸಲು ಎಸ್ ಐಟಿ ರಚಿಸಲು ನಿರಾಕರಣೆ ಮಾಡಿರುವುದು ಒಂದು ರೀತಿಯಲ್ಲಿ ಈಗಾಗಲೇ ಕೇಸ್ ತಿರುಚುವ ಮುಖಾಂತರ ಸ್ಥಳಿಯ ಪೊಲೀಸರು ಮುಚ್ಚಿಹಾಕುವ ಪ್ರಯತ್ನ ಮಾಡುವುದಕ್ಕೆ ಲೈಸೆನ್ಸ್ ಕೊಟ್ಟಂತಾಗಿದೆ.

ಈ ನಿಲುವನ್ನು ಖಂಡಿಸುತ್ತೇನೆ. ಅವರಿಗೆ ಸಂತ್ರಸ್ತ ಮಹಿಳೆಗೆ ನ್ಯಾಯಕೊಡಿಸುವ ಉದ್ದೇಶ ಇದ್ದರೆ ಕೂಡಲೆ ಎಸ್ ಐಟಿ ರಚನೆ ಮಾಡಬೇಕೆಂದು ಆಗ್ರಹಿಸುತ್ತೇನೆ ಎಂದು ಮಾಜಿ ಸಿಎಂ ಬೊಮ್ಮಾಯಿ ಹೇಳಿದ್ದಾರೆ.

 

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...