
ಬೆಂಗಳೂರು: ರಾಜ್ಯದ ಎರಡು ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ.
ಸಿಂದಗಿ ವಿಧಾನಸಭಾ ಕ್ಷೇತ್ರಕ್ಕೆ ಅಶೋಕ ಮನಗೂಳಿ ಮತ್ತು ಹಾನಗಲ್ ವಿಧಾನಸಭಾ ಕ್ಷೇತ್ರಕ್ಕೆ ಶ್ರೀನಿವಾಸ್ ಮಾನೆ ಅವರನ್ನು ಅಭ್ಯರ್ಥಿಗಳಾಗಿ ಘೋಷಣೆ ಮಾಡಲಾಗಿದೆ. ಅಕ್ಟೋಬರ್ 30 ರಂದು ಎರಡು ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ.
ಅಶೋಕ ಮನಗೂಳಿ ಅವರಿಗೆ ಟಿಕೆಟ್ ಖಾತರಿಯಾಗಿತ್ತು. ಹಾನಗಲ್ ವಿಧಾನಸಭಾ ಕ್ಷೇತ್ರದಲ್ಲಿ ಮನೋಹರ್ ತಹಸಿಲ್ದಾರ್ ಟಿಕೆಟ್ ಗಾಗಿ ಭಾರಿ ಪೈಪೋಟಿ ನಡೆಸಿದ್ದರು. ಹೊರಗಿನವರಿಗೆ ಟಿಕೆಟ್ ಕೊಡದೇ ತಮಗೇ ನೀಡಬೇಕೆಂದು ಒತ್ತಾಯಿಸಿದ್ದರು. ಅಂತಿಮವಾಗಿ ಶ್ರೀನಿವಾಸ ಮಾನೆ ಅವರಿಗೆ ಕಾಂಗ್ರೆಸ್ ಅವಕಾಶ ನೀಡಿದೆ. ಇದರಿಂದಾಗಿ ಮನೋಹರ ತಹಶೀಲ್ದಾರ್ ಅವರಿಗೆ ಮತ್ತೆ ನಿರಾಸೆಯಾಗಿದೆ