ಬೆಳಗಾವಿ : ಬೆಳಗಾವಿ ಸಂತ್ರಸ್ತ ಮಹಿಳೆಗೆ ಜ.1 ರೊಳಗೆ ಭೂಮಿ ಹಸ್ತಾಂತರಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.
ಬೆಳಗಾವಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.ಕಂಬಕ್ಕೆ ಕಟ್ಟಿ ಹಾಕಿ ಅಮಾನವೀಯವಾಗಿ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ರಾಜ್ಯ ಸರ್ಕಾರ ಸಂತ್ರಸ್ತ ಮಹಿಳೆಗೆ ನೀಡುವುದಾಗಿ ಭರವಸೆ ನೀಡಿರುವ 2.03 ಎಕರೆ ಭೂಮಿಯನ್ನು ಜನವರಿ 1, 2024 ರೊಳಗಾಗಿ ಹಸ್ತಾಂತರಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಗಡುವು ನೀಡಿದೆ. ಹಾಗೂ ಮಹಿಳೆಯನ್ನು ವಿವಸ್ತ್ರಗೊಳಿಸಿದಾಗ ನಿಂತು ನೋಡುತ್ತಿದ್ದವರ ಜನರ ಮೇಲೆ ದಂಡ ವಿಧಿಸಬೇಕು ಎಂದು ಹೈಕೋರ್ಟ್ ಸೂಚನೆ ನೀಡಿದೆ.
ಏನಿದು ಘಟನೆ
ಪ್ರೀತಿಸಿದ್ದ ಯುವತಿ ಜೊತೆ ಓಡಿ ಹೋಗಿದ್ದ ಯುವಕನ ತಾಯಿಯನ್ನೇ ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ಬೆಳಗಾವಿಯ ವಂಟಮೂರಿ ಗ್ರಾಮದಲ್ಲಿ ನಡೆದಿತ್ತು.ಪ್ರೀತಿಸಿದ್ದ ಯುವತಿ ಜೊತೆ ಗ್ರಾಮದ ಯುವಕ ಓಡಿ ಹೋಗಿದ್ದಾನೆ ಎಂದು ಸಿಟ್ಟಿಗೆದ್ದ ಯುವತಿ ಪೋಷಕರು ಯುವಕನ ತಾಯಿಯನ್ನು ಹೊರಕ್ಕೆ ಎಳೆದುಕೊಂಡು ಬಂದು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಅಮಾನುಷವಾಗಿ ಹಲ್ಲೆ ನಡೆಸಿದ್ದರು.
ವಂಟಮೂರಿ ಗ್ರಾಮದಲ್ಲಿ ಪ್ರೀತಿಸಿದ್ದ ಯುವತಿ ಜೊತೆ ಗ್ರಾಮದ ಯುವಕ ಓಡಿ ಹೋಗಿದ್ದಾನೆ ಎಂದು ಸಿಟ್ಟಿಗೆದ್ದ ಯುವತಿ ಪೋಷಕರು ಯುವಕನ ತಾಯಿಯನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಅಮಾನುಷವಾಗಿ ಹಲ್ಲೆ ನಡೆಸಿದ್ದು, ಘಟನೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.