
ಬೆಂಗಳೂರು: ಬೆಂಗಳೂರಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆಯಾಗಿದೆ. ಮಂಜುನಾಥ ನಗರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಸಂಧ್ಯಾ ಎಂಬುವವರ ಶವ ಕಂಡು ಬಂದಿದೆ.
5 ವರ್ಷದ ಹಿಂದೆ ಜಯಪ್ರಕಾಶ್ ಎಂಬುವವರ ಜೊತೆ ಸಂಧ್ಯಾ ಮದುವೆಯಾಗಿತ್ತು. ಜಯಪ್ರಕಾಶ್ ಸಾಫ್ಟ್ವೇರ್ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಗಂಡನ ಮನೆಯವರೇ ಪುತ್ರಿಯನ್ನು ಕೊಲೆ ಮಾಡಿದ್ದಾರೆ ಎಂದು ಸಂಧ್ಯಾ ಪೋಷಕರು ಆರೋಪ ಮಾಡಿದ್ದಾರೆ. ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.