ಮಂಗಳೂರು: ಆಟವಾಡುವ ವೇಳೆ ಜೋಕಾಲಿ ಹಗ್ಗ ಕುತ್ತಿಗೆಗೆ ಸುತ್ತಿಕೊಂಡು ಬಾಲಕಿ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಅನಂತಾಡಿಯಲ್ಲಿ ನಡೆದಿದೆ.
11 ವರ್ಷದ ಲಿಖಿತಾ ಮೃತಪಟ್ಟ ಬಾಲಕಿ ಎಂದು ಹೇಳಲಾಗಿದೆ. ಬಾಬನಕಟ್ಟೆ ಶಾಲೆಯಲ್ಲಿ 6 ನೇ ತರಗತಿ ಓದುತ್ತಿದ್ದ ಲಿಖಿತಾ ಸೋಮವಾರ ಸಂಜೆ ಮನೆಯಲ್ಲಿ ಕಟ್ಟಿದ್ದ ಜೋಕಾಲಿಯಲ್ಲಿ ಆಟವಾಡುತ್ತಿದ್ದ ಸಂದರ್ಭದಲ್ಲಿ ಕುತ್ತಿಗೆಗೆ ಹಗ್ಗ ಸುತ್ತಿಕೊಂಡು ಮೃತಪಟ್ಟಿದ್ದಾಳೆ ಎನ್ನಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.