ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಹನುಮ ಮಾಲಾಧಾರಿಗಳಿಂದ ಬೃಹತ್ ಸಂಕೀರ್ತನಾ ಯಾತ್ರೆ ನಡೆಯುತ್ತಿದ್ದು, ಈ ವೇಳೆ ಅವಘಡವೊಂದು ಸಂಭವಿಸಿದೆ.
ಸಂಕೀರ್ತನಾ ಯಾತ್ರೆಗೆ ಆಗಮಿಸುತ್ತಿದ್ದ ಬೈಕ್ ಸ್ಕಿಡ್ ಆಗಿ ಮೂವರು ಹನುಮ ಮಾಲಾಧಾರಿಗಳು ಗಾಯಗೊಂಡಿರುವ ಘಟನೆ ಶ್ರೀರಂಗಪಟ್ಟಣದ ಶೆಟ್ಟಿಹಳ್ಳಿ ಬಳಿ ನಡೆದಿದೆ.
ಒಂದೇ ಬೈಕ್ ನಲ್ಲಿ ಮೂವರು ಬರುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಗಾಯಾಳುಗಳನ್ನು ಶ್ರೀರಂಗಪಟ್ಟಣದ ತಾಲೂಕು ಆಸ್ಪತ್ರೆಗೆದಾಖಲಿಸಲಾಗಿದೆ.
ಶ್ರೀರಂಗಪಟ್ಟಣದಲ್ಲಿ ಹನುಮ ಮಾಲಾಧಾರಿಗಳಿಂದ ಬೃಹತ್ ಸಂಕೀರ್ತನಾ ಯಾತ್ರೆ ನಡೆಯುತ್ತಿದ್ದು, ನಿಮಿಷಾಂಬಾ ದೇವಸ್ಥಾನದಿಮ್ದ ಆರಂಭವಾಗಿರುವ ಯತರೆ ಜಾಮೀಯಾ ಮಸೀದಿ ಮುಂಭಗದಿಂದ ರಂಗನಾಥಸ್ವಾಮಿ ದೇವಸ್ಥಾನದವರೆಗೆ ನಡೆಯಲಿದೆ. ಶ್ರೀರಂಗಪಟ್ಟಣ ಸಂಪೂರ್ಣ ಕೇಸರಿ ಮಯವಾಗಿದ್ದು, ಎಲ್ಲೆಲ್ಲೆಲ್ಲೂ ಹನುಮಧ್ವಜ ರಾರಾಜಿಸುತ್ತಿದೆ.