alex Certify ನಮ್ಮ ಹಿಂದುತ್ವ ಹನುಮಂತನಷ್ಟು ಶಕ್ತಿಶಾಲಿಯಾಗಿದೆ: ಬಿಜೆಪಿಗೆ ಉದ್ಧವ್ ಠಾಕ್ರೆ ಟಾಂಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಮ್ಮ ಹಿಂದುತ್ವ ಹನುಮಂತನಷ್ಟು ಶಕ್ತಿಶಾಲಿಯಾಗಿದೆ: ಬಿಜೆಪಿಗೆ ಉದ್ಧವ್ ಠಾಕ್ರೆ ಟಾಂಗ್

ಶಿವಸೇನಾ ಪಕ್ಷವು,‌ ಹಿಂದುತ್ವದ ಬಗ್ಗೆ ಬೇರೆಯವರಿಂದ ತಿಳಿಯಬೇಕಾದ ಅಗತ್ಯವಿಲ್ಲ, ನಮ್ಮ ಹಿಂದುತ್ವ ಹನುಮಂತನಷ್ಟು ಶಕ್ತಿಶಾಲಿಯಾಗಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.

ಮಹಾರಾಷ್ಟ್ರದಲ್ಲಿ ಆಜಾನ್ ವಿರುದ್ಧ ಹನುಮಾನ್ ಚಾಲೀಸ ಪಠಣೆಗೆ ಬಿಜೆಪಿ ಕರೆ ನೀಡಿರುವ ಹಿನ್ನೆಲೆಯಲ್ಲಿ, ಹಿಂದುತ್ವದ ಗುರುತನ್ನು ಕೆಡಿಸಲು ಬಿಜೆಪಿ ಯತ್ನಿಸುತ್ತಿದೆ ಎಂದು ಉದ್ಧವ್ ಠಾಕ್ರೆ ವಾಗ್ದಾಳಿ ನಡೆಸಿದ್ದಾರೆ.

BIG NEWS: ಹುಷಾರಿಲ್ಲ ಎಂದು ಆಸ್ಪತ್ರೆಗೆ ಹೋದ ಮಹಿಳೆಯರಿಗೆ ಶಾಕ್; 1,522 ಮಂದಿಗೆ ಗರ್ಭಕೋಶ ಶಸ್ತ್ರಚಿಕಿತ್ಸೆ ಮಾಡಿದ ಡಾಕ್ಟರ್; ಪರಿಹಾರಕ್ಕೆ ಆಗ್ರಹಿಸಿ ಸಿಎಂ ಬೊಮ್ಮಾಯಿ ನಿವಾಸಕ್ಕೆ ಪಾದಯಾತ್ರೆ

ಶಿವಸೇನಾ ಹಿಂದುತ್ವವನ್ನು ತೊರೆದಿದೆ ಎಂದು ಬಿಜೆಪಿ ಆರೋಪಿಸುತ್ತಿದೆ. ಹಿಂದುತ್ವದ ಬಗ್ಗೆ ಉಪದೇಶಿಸುವವರು ತಾವು ಹಿಂದುತ್ವಕ್ಕಾಗಿ ಏನು ಮಾಡಿದ್ದೇವೆ ಎಂದು ಪ್ರಶ್ನಿಸಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.

ನಮ್ಮ ತಂದೆ ಶಿವಸೇನಾ ಸ್ಥಾಪಕ, ಬಾಳ ಸಾಹೇಬ್ ಠಾಕ್ರೆ ಹಿಂದುತ್ವದ ಬಗ್ಗೆ ನಮ್ಮ ಪಕ್ಷಕ್ಕೆ ತಿಳಿಸಿದ್ದಾರೆ. ಗಂಟೆ ಬಾರಿಸುವವರು ಹಿಂದುತ್ವವಾದಿಗಳಾ ಎಂದು ಉದ್ದವ್ ಠಾಕ್ರೆ ವ್ಯಂಗ್ಯವಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...