ಮಂಡ್ಯ : ಮಂಡ್ಯದಲ್ಲಿ ಹನುಮಾನ್ ಧ್ವಜ ದಂಗಲ್ ತಾರಕಕ್ಕೇರಿದ್ದು, ಮಾಜಿ ಸಿಎಂ ಕುಮಾರಸ್ವಾಮಿ ಕೇಸರಿ ಶಾಲು ಹಾಕಿಕೊಂಡು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.
ಹನುಮಾನ್ ಧ್ವಜ ತೆರವು ವಿರೋಧಿಸಿ ಮಂಡ್ಯದ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಬಿಜೆಪಿ ಹಾಗೂ ಜೆಡಿಎಸ್ ಜಂಟಿಯಾಗಿ ಹೋರಾಟ ನಡೆಸುತ್ತಿದೆ. ಪ್ರತಿಭಟನೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ, ಮಾಜಿ ಶಾಸಕ ಸಿಟಿ ರವಿ ಸೇರಿದಂತೆ ಹಲವಾರು ಕಾರ್ಯಕರ್ತರು ಭಾಗಿಯಾಗಿದ್ದಾರೆ.
ಮಂಡ್ಯದ ಡಿಸಿ ಕಚೇರಿ ಬಳಿ ನೂರಾರು ಮಂದಿ ಪ್ರತಿಭಟನಾಕಾರರು ಜಮಾಯಿಸಿದ್ದು, ಫ್ಲೆಕ್ಸ್ ಗಳಿಗೆ ಕಲ್ಲು ತೂರಿ ಪ್ರತಿಭಟನೆ ನಡೆಸುತ್ತಿದ್ದಾರೆ.