ಮಂಡ್ಯ : ಮಂಡ್ಯದಲ್ಲಿ ನಡೆಯುತ್ತಿರುವ ‘ಹನುಮಾನ್ ಧ್ವಜ’ ದಂಗಲ್ ಗೆ ಮಾಜಿ ಸಿಎಂ ಕುಮಾರಸ್ವಾಮಿ ಸಾಥ್ ನೀಡಿದ್ದು, ಕೇಸರಿ ಶಾಲು ಧರಿಸಿ ಜೈ ಶ್ರೀರಾಮ್ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನೆಯಲ್ಲಿ ಭಾಗಿಯಾಗಿ ನಂತರ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ ಕೆರಗೋಡು ಗ್ರಾಮದಲ್ಲಿನ ಸಂಘರ್ಷಕ್ಕೆ ಸರಕಾರವೇ ಕಾರಣ, ಮಂಡ್ಯ ಜಿಲ್ಲಾಧಿಕಾರಿಯನ್ನು ಮೊದಲು ಅಮಾನತ್ತು ಮಾಡಿ, 144 ಸೆಕ್ಷನ್ ಮೊದಲು ಕಿತ್ತುಹಾಕಿ. ಜನರು ಕೆರಳಿದರೆ ಪೊಲೀಸರಿಂದ ತಡೆಯಲು ಸಾಧ್ಯವಿಲ್ಲ . ಇಲ್ಲಿಂದ ಹೊರಗೆ ಕಳುಹಿಸಿ. ಹನುಮಂತನ ಕೆಣಕ್ಕಿದ್ದಕ್ಕೆ ಲಂಕ ದಹನವಾಯ್ತು, ಅದೇ ರೀತಿ ನಿಮ್ಮ ಅವನತಿ ಆಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಅಧಿಕಾರಿಗಳು ತಕ್ಷಣ ಕೆರಗೋಡಿನಲ್ಲಿ ಶಾಂತಿ ಸಭೆ ಕರೆಯಬೇಕು. ಧ್ವಜದ ಮರು ಸ್ಥಾಪನೆ ಆಗಬೇಕು. ಅಲ್ಲಿಯವರೆಗೂ ನಮ್ಮ ಹೋರಾಟ ಮುಂದುವರೆಯುತ್ತದೆ ಎಂದರು. ಈ ಬಾರಿ ಲೋಕಸಭೆಯಲ್ಲಿ 28 ಸ್ಥಾನಗಳಲ್ಲಿ ಜನ ಪಾಠ ಕಲಿಸುತ್ತಾರೆ. ಅದಕ್ಕಾಗಿಯೇ ಅವರು ಹನುಮ ಧ್ವಜ ತೆಗೆಸಿದ್ದಾರೆ ಎಂದರು.