ದಾವಣಗೆರೆ: ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಹನಗವಾಡಿಯ ಹರ ಜಾತ್ರೆಯಲ್ಲಿ ಮಾಜಿ ಸಚಿವ ಮುರುಗೇಶ್ ನಿರಾಣಿಗೆ ಕಾರ್ ಉಡುಗೊರೆಯಾಗಿ ನೀಡಲಾಗಿದೆ.
ಪಂಚಮಸಾಲಿ ಸಮಾಜದ ರಾಜ್ಯಾಧ್ಯಕ್ಷ ಎಂದು ಅವರಿಗೆ ಹೊಸ ಕಾರ್ ಉಡುಗೊರೆ ನೀಡಲಾಗಿದೆ. ಹನಗವಾಡಿ ಸಮೀಪದ ಪಂಚಮಸಾಲಿ ಗುರುಪೀಠದಲ್ಲಿ ನಡೆದ ಜಾತ್ರೆಯ ಕಾರ್ಯಕ್ರಮದಲ್ಲಿ ಹೊಸ ಕಾರ್ ಕೊಟ್ಟಿದ್ದಕ್ಕೆ ಇಬ್ಬರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಹೀಗೆ ಆಕ್ಷೇಪ ವ್ಯಕ್ತಪಡಿಸಿದವರನ್ನು ಪಂಚಮಸಾಲಿ ಸಮಾಜದ ಕೆಲವರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಪೊಲೀಸರು ಮಧ್ಯ ಪ್ರವೇಶಿಸುತ್ತಿದ್ದಂತೆ ಬಿಟ್ಟು ಕಳುಹಿಸಿದ್ದಾರೆ. ಹಲ್ಲೆಗೊಳಗಾದ ಒಬ್ಬರಿಗೆ ತಲೆಗೆ ಪೆಟ್ಟು ಬಿದ್ದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.