
ಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪದಡಿ ಕಿರುತೆರೆ ನಟ ಚರಿತ್ ಬಾಳಪ್ಪನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಆರ್.ಆರ್. ನಗರ ಠಾಣೆ ಪೊಲೀಸರು, ತನ್ನ ಗೆಳತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಚರಿತ್ ಬಾಳಪ್ಪ ಅವರನ್ನು ಬಂಧಿಸಿದ್ದಾರೆ.
ಪ್ರೀತಿಸುತ್ತೇನೆ ಎಂದು ಹೇಳಿ ದೈಹಿಕ ಸಂಪರ್ಕಕ್ಕೆ ಬಲವಂತ ಮಾಡಿದ್ದ ಆರೋಪ ಕೇಳಿ ಬಂದಿದೆ. ಯುವತಿ ಮನೆಗೆ ನುಗ್ಗಿ ಸಹಚರರ ಜೊತೆಗೆ ಸೇರಿ ಕಿರುಕುಳ ನೀಡಿದ್ದಾಗಿ ಆರೋಪಿಸಲಾಗಿದೆ. ಅಲ್ಲದೆ, ಯುವತಿಯ ಬಳಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಹಣ ಕೊಡದಿದ್ದರೆ ಖಾಸಗಿ ಫೋಟೋ, ವಿಡಿಯೋ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.
ಕಿರುತೆರೆ ನಟ ಚರಿತ್ ಬಾಳಪ್ಪ ವಿರುದ್ಧ ಯುವತಿ ಲೈಂಗಿಕ ದೌರ್ಜನ್ಯ, ಕೊಲೆ ಬೆದರಿಕೆ, ಹಲ್ಲೆ ಆರೋಪ ಮಾಡಿದ್ದು, ಘಟನೆ ಸಂಬಂಧ ಚರಿತ್ ಬಾಳಪ್ಪನನ್ನು ಪೊಲೀಸರು ಬಂಧಿಸಿದ್ದಾರೆ.
ಪತ್ನಿಯಿಂದ ವಿಚ್ಛೇದನ ಪಡೆದುಕೊಂಡಿರುವ ಚರಿತ್ ಬಾಳಪ್ಪ ವಿರುದ್ಧ ಈ ಹಿಂದೆ ಪತ್ನಿ ದೂರು ನೀಡಿದ್ದರು. ಕೋರ್ಟ್ ಆದೇಶದಂತೆ ವಿಚ್ಛೇದನ ಪರಿಹಾರ ಹಣಕ್ಕೆ ದೂರು ನೀಡಲಾಗಿತ್ತು.
ನೋಟಿಸ್ ಕಳಿಸಿದ್ದಕ್ಕೆ ಬೆದರಿಕೆ ಹಾಕಿದ್ದಾರೆ ಎಂದು ಕಳೆದ ಜೂನ್ ತಿಂಗಳಲ್ಲಿ ಎನ್.ಸಿ.ಆರ್. ದಾಖಲಾಗಿತ್ತು. ಕನ್ನಡದ ‘ಮುದ್ದು ಲಕ್ಷ್ಮಿ’ ಸೇರಿ ಹಲವು ಧಾರಾವಾಹಿಗಳಲ್ಲಿ ಚರಿತ್ ಬಾಳಪ್ಪ ನಟಿಸಿದ್ದು, ತೆಲುಗಿನಲ್ಲಿಯೂ ಕೆಲವು ಧಾರಾವಾಹಿಗಳಲ್ಲಿ ಅಭಿನಯಿಸಿದ್ದಾರೆ.