alex Certify ಬಸ್ ನಲ್ಲೇ ಯುವತಿಗೆ ಕಿರುಕುಳ, ಅಸಭ್ಯ ವರ್ತನೆ: ಆರೋಪಿ ವಶಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಸ್ ನಲ್ಲೇ ಯುವತಿಗೆ ಕಿರುಕುಳ, ಅಸಭ್ಯ ವರ್ತನೆ: ಆರೋಪಿ ವಶಕ್ಕೆ

ಮಂಗಳೂರು: KSRTC ಬಸ್ ನಲ್ಲಿ ಯುವತಿಗೆ ಕಿರುಕುಳ ನೀಡಿದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಜುಲೈ 29ರಂದು ಮಂಗಳೂರಿನಿಂದ ಚಿಕ್ಕಮಗಳೂರಿಗೆ ಸಂಚರಿಸುತ್ತಿದ್ದ ಸಾರಿಗೆ ಬಸ್ನಲ್ಲಿ ವಿದ್ಯಾರ್ಥಿನಿಗೆ ಯುವಕನೋರ್ವ ಕಿರುಕುಳ ನೀಡಿ ಅಸಭ್ಯವಾಗಿ ವರ್ತಿಸಿದ್ದಾನೆ.

ಮೂಡಿಗೆರೆಯ ವಿದ್ಯಾರ್ಥಿನಿ ಕೆಎಸ್ಆರ್ಟಿಸಿ ಬಸ್ ನಲ್ಲಿ ಮಂಗಳೂರಿನಿಂದ ಪ್ರಯಾಣಿಸುತ್ತಿದ್ದ ವೇಳೆ ಪಕ್ಕದ ಸೀಟ್ ನಲ್ಲಿ ಕುಳಿತಿದ್ದ ಆರೋಪಿ ಆಕೆಯ ಮೇಲೆ ಕೈ ಹಾಕಿದ್ದಾನೆ. ಯುವತಿ ಪ್ರತಿರೋಧ ತೋರಿದ್ದು, ಉಜಿರೆಯ ಎಸ್.ಡಿ.ಎಂ. ಕಾಲೇಜಿನಲ್ಲಿ ಓದುತ್ತಿದ್ದ ತನ್ನ ಸ್ನೇಹಿತರಿಗೆ ಮಾಹಿತಿ ನೀಡಿದ್ದಾಳೆ. ಜೊತೆಗೆ ಪೋಷಕರಿಗೂ ವಿಷಯ ತಿಳಿಸಿದ್ದಾಳೆ. ಉಜಿರೆ ಬಳಿ ಬಸ್ ಬಂದಾಗ ಆರೋಪಿಯನ್ನು ಬಸ್ ಚಾಲಕ ಮತ್ತು ನಿರ್ವಾಹಕರ ಸಹಾಯ ಪಡೆದು ಬಸ್ ನಿಂದ ಕೆಳಗೆ ಇಳಿಸಿ ಪೊಲೀಸರಿಗೆ ಒಪ್ಪಿಸಲಾಗಿದೆ. ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...