alex Certify ಪುಸಲಾಯಿಸಿ ಕಾಮುಕರ ನೀಚ ಕೃತ್ಯ, ಪುತ್ರಿಯನ್ನು ಆಸ್ಪತ್ರೆಗೆ ಕರೆದೊಯ್ದ ಪೋಷಕರಿಗೆ ಬಿಗ್ ಶಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪುಸಲಾಯಿಸಿ ಕಾಮುಕರ ನೀಚ ಕೃತ್ಯ, ಪುತ್ರಿಯನ್ನು ಆಸ್ಪತ್ರೆಗೆ ಕರೆದೊಯ್ದ ಪೋಷಕರಿಗೆ ಬಿಗ್ ಶಾಕ್

ಧಾರವಾಡ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಇಬ್ಬರನ್ನು ಧಾರವಾಡದ ಉಪನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಧಾರವಾಡದ ನೆಹರು ನಗರ ನಿವಾಸಿ ಶ್ರೀನಿವಾಸ, ಫಯೂಮ್ ಬಂಧಿತ ಆರೋಪಿಗಳು ಎಂದು ಹೇಳಲಾಗಿದೆ. ಇವರಿಬ್ಬರು 13 ವರ್ಷದ ಬಾಲಕಿ ಪುಸಲಾಯಿಸಿ ಕರೆದೊಯ್ದು, ಲೈಂಗಿಕ ದೌರ್ಜನ್ಯವೆಸಗಿದ್ದಾರೆ. ಬಾಲಕಿಗೆ ಆರೋಗ್ಯ ತೊಂದರೆ ಉಂಟಾಗಿದ್ದು, ಆಕೆಯನ್ನು ಪೋಷಕರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ವೈದ್ಯರು ಲೈಂಗಿಕ ದೌರ್ಜನ್ಯ ನಡೆದಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.

ಪೋಷಕರು ಪೊಲೀಸರಿಗೆ ದೂರು ನೀಡಿದ್ದು, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಕಾಮುಕರನ್ನು ಬಂಧಿಸಲಾಗಿದೆ ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...