ಮಂಗಳೂರು: ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಂ ನಲ್ಲಿ ಬಾಲಕಿಗೆ ಪ್ರೀತಿಸುವಂತೆ ಕಿರುಕುಳ ನೀಡುತ್ತಿದ್ದ ಮತ್ತು ಮತಾಂತರಕ್ಕೆ ಬಲವಂತ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಲಾಗಿದೆ.
ಕಡಬ ತಾಲೂಕಿನ ಸವಣೂರಿನ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿರುವ ಆರೋಪಿ ಇನ್ಸ್ಟಾಗ್ರಾಂ ನಲ್ಲಿ ಪ್ರೀತಿಸುವಂತೆ ಬಾಲಕಿಗೆ ಅಸಭ್ಯ ಸಂದೇಶ ರವಾನಿಸುತ್ತಿದ್ದ. ಅಲ್ಲದೆ, ತನ್ನ ಧರ್ಮಕ್ಕೆ ಮತಾಂತರವಾಗುವಂತೆ ಬಲವಂತ ಮಾಡುತ್ತಿದ್ದ ಎನ್ನಲಾಗಿದ್ದು, ಬಾಲಕಿಯ ಪೋಷಕರು ಬೆಳ್ಳಾರೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.