alex Certify ಟ್ಯೂಷನ್ ಹೇಳಿಕೊಡುವುದಾಗಿ ಮನೆಗೆ ಮಕ್ಕಳ ಕರೆಸಿಕೊಂಡು ಶಿಕ್ಷಕನಿಂದ ನೀಚ ಕೃತ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಟ್ಯೂಷನ್ ಹೇಳಿಕೊಡುವುದಾಗಿ ಮನೆಗೆ ಮಕ್ಕಳ ಕರೆಸಿಕೊಂಡು ಶಿಕ್ಷಕನಿಂದ ನೀಚ ಕೃತ್ಯ

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನಲ್ಲಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಶಿಕ್ಷಕನನ್ನು ಬಂಧಿಸಲಾಗಿದೆ.

ಸಾವಳಗಿ ಪೊಲೀಸ್ ಠಾಣೆ ವ್ಯಾಪ್ತಿಯ ಶಾಲೆಯೊಂದರ ಶಿಕ್ಷಕ ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸೆಗಿದ್ದು ಪೋಕ್ಸೋ ಕಾಯ್ದೆಯಡಿ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಮನೆಯಲ್ಲಿ ಟ್ಯೂಷನ್ ಹೇಳಿಕೊಡುವುದಾಗಿ ವರ್ಷದಿಂದ ಮಕ್ಕಳನ್ನು ಕರೆಸಿಕೊಂಡು ಶಿಕ್ಷಕ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಎನ್ನಲಾಗಿದೆ. ಮಾಹಿತಿ ತಿಳಿದ ಪೋಷಕರು ಜಿಲ್ಲಾಧಿಕಾರಿಗೆ ದೂರು ನೀಡಿದ್ದರು. ಅವರ ಸೂಚನೆ ಮೇರೆಗೆ ಪೊಲೀಸರು ಕ್ರಮ ಕೈಗೊಂಡಿದ್ದು, ಆರೋಪಿ ಶಿಕ್ಷಕನನ್ನು ಬಂಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...