ತುಮಕೂರು: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ದೊಡ್ಡೇರಿ ಸಮೀಪದ ಬೋರಗುಂಟೆ ಸರ್ಕಾರಿ ಪ್ರಾಥಮಿಕ ಶಾಲೆ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ.
ಶಿಕ್ಷಕ ಪ್ರತಿದಿನ ಲೈಂಗಿಕ ಕಿರುಕುಳ ನೀಡುತ್ತಿರುವುದಾಗಿ ವಿದ್ಯಾರ್ಥಿನಿಯರು ಪೋಷಕರ ಬಳಿ ತಿಳಿಸಿದ್ದಾರೆ. ಸೋಮವಾರ ಶಾಲೆ ಆರಂಭವಾಗುವ ಮೊದಲು ಶಿಕ್ಷಕನನ್ನು ತಡೆದ ಗ್ರಾಮಸ್ಥರು ವಿಚಾರಿಸಿದ್ದಾರೆ. ಅಲ್ಲದೆ ಶಿಕ್ಷಕನನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ಬಂದ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಪೊಲೀಸ್ ಅಧಿಕಾರಿಗಳು ಪರಿಶೀಲನೆ ನಡೆಸಿ ವಿದ್ಯಾರ್ಥಿನಿಯರ ಹೇಳಿಕೆ ಪಡೆದುಕೊಂಡಿದ್ದಾರೆ. ಬಡವನಹಳ್ಳಿ ಪೊಲೀಸ್ ಠಾಣೆಯಲ್ಲಿ ಶಿಕ್ಷಕನ ವಿರುದ್ಧ ಪೋಕ್ಸೋ ಕಾಯ್ದೆ ಅಡಿ ದೂರು ದಾಖಲಾಗಿದ್ದು, ಆತನನ್ನು ಬಂಧಿಸಲಾಗಿದೆ.