ಯಾದಗಿರಿ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಪ್ರಭಾರ ಪ್ರಾಂಶುಪಾಲರನ್ನು ಅಮಾನತು ಮಾಡಲಾಗಿದೆ.
ಯಾದಗಿರಿ ತಾಲೂಕು ಮುಂಡರಗಿ ಸಮೀಪದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಪ್ರಭಾರ ಪ್ರಾಂಶುಪಾಲ ವಸತಿ ಶಾಲೆ ವಿದ್ಯಾರ್ಥಿನಿಯರಿಗೆ ಹೆಚ್ಚು ಅಂಕ ಕೊಡುವುದಾಗಿ ಲೈಂಗಿಕ ಕಿರುಕುಳ ನೀಡಿದ್ದ ಆರೋಪದ ಹಿನ್ನಲೆಯಲ್ಲಿ ನಿನ್ನೆ ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿತ್ತು. ಆತನನ್ನು ಅಮಾನತು ಮಾಡಲಾಗಿದೆ.
ಯಾದಗಿರಿ ಮಹಿಳಾ ಠಾಣೆಯಲ್ಲಿ ಪೋಕ್ಸೋ ಪ್ರಕರಣದಡಿ ಕೇಸು ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ ಎಂದು ಹೇಳಲಾಗಿದೆ.