alex Certify SHOCKING: ರಸ್ತೆಯಲ್ಲೇ ಯುವತಿ ಅಂಗಾಂಗ ಸ್ಪರ್ಶಿಸಿ ಲೈಂಗಿಕ ಕಿರುಕುಳ, ಹಲ್ಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ರಸ್ತೆಯಲ್ಲೇ ಯುವತಿ ಅಂಗಾಂಗ ಸ್ಪರ್ಶಿಸಿ ಲೈಂಗಿಕ ಕಿರುಕುಳ, ಹಲ್ಲೆ

ಬೆಂಗಳೂರಿನಲ್ಲಿ ಆಘಾತಕಾರಿ ಘಟನೆ ನಡೆದಿದೆ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯನ್ನು ಹಿಂಬಾಲಿಸಿ ಬಂದ ಯುವಕ ಅಂಗಾಂಗ ಸ್ಪರ್ಶಿಸಿ ಲೈಂಗಿಕ ಕಿರುಕುಳ ನೀಡಿದ್ದು, ಆಕೆಯ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.

ಶಾಂತಿನಗರ ನಿವಾಸಿಯಾಗಿರುವ 22 ವರ್ಷದ ಯುವತಿ ಜಯನಗರದ ಖಾಸಗಿ ಕಂಪನಿಯೊಂದರ ಉದ್ಯೋಗಿಯಾಗಿದ್ದಾರೆ. ಭಾನುವಾರ ಬೆಳಗ್ಗೆ 8 ಗಂಟೆ ಸುಮಾರಿಗೆ ಲ್ಯಾಂಗ್ ಫೋರ್ಡ್ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಹಿಂಬಾಲಿಸಿ ಬಂದ ಯುವಕ ತಬ್ಬಿಕೊಂಡು ಅಂಗಾಂಗ ಸ್ಪರ್ಶಿಸಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಪ್ರಶ್ನಿಸಿದಾಗ ಹಲ್ಲೆ ಮಾಡಿದ್ದಾನೆ. ಕೂಗಾಡಿದಾಗ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಹೇಳಲಾಗಿದ್ದು, ಅಶೋಕ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...