ಬೆಂಗಳೂರು: ಪ್ರೀತಿಸುವಂತೆ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಯುವಕನನ್ನು ಚಂದ್ರಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ನಾಗರಬಾವಿ ನಿವಾಸಿ ರಾಜೇಶ್(22) ಬಂಧಿತ ಆರೋಪಿ ಎಂದು ಹೇಳಲಾಗಿದೆ. ಕಳೆದ ಮೂರು ವರ್ಷಗಳ ಹಿಂದೆ ವಿದ್ಯಾರ್ಥಿನಿಗೆ ರಾಜೇಶ್ ಪರಿಚಯವಾಗಿದ್ದು, ಕೆಲವು ದಿನಗಳಿಂದ ಪ್ರೀತಿಸುವಂತೆ ದುಂಬಾಲು ಬಿದ್ದಿದ್ದ. ಪ್ರೀತಿಸಲು ನಿರಾಕರಿಸಿದಾಗ ಕೈ, ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಸಿದ್ದ. ಪೋಷಕರ ಹೆಸರನ್ನು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ. ನೀವು ಜೈಲಿಗೆ ಹೋಗುತ್ತೀರಿ ಎಂದು ಹೆದರಿಸಿದ್ದ. ಇದಲ್ಲದೆ ಯುವತಿಯ ಪೋಷಕರಿಗೆ ಕರೆ ಮಾಡಿ ಮದುವೆ ಮಾಡಿಕೊಡುವಂತೆ ಒತ್ತಡ ಹಾಕಿದ್ದಲ್ಲದೆ ಅಶ್ಲೀಲ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ನೊಂದ ವಿದ್ಯಾರ್ಥಿನಿ ಪೊಲೀಸರಿಗೆ ದೂರು ನೀಡಿದ್ದು, ಪ್ರಕರನ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಎನ್ನಲಾಗಿದೆ.