alex Certify ನೀರು ಕೇಳುವ ನೆಪದಲ್ಲಿ ಲೈಂಗಿಕ ದೌರ್ಜನ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನೀರು ಕೇಳುವ ನೆಪದಲ್ಲಿ ಲೈಂಗಿಕ ದೌರ್ಜನ್ಯ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಉಳ್ಳೂರು ಸಮೀಪದ ಗ್ರಾಮವೊಂದರಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ನಡೆದಿದ್ದು, ಸಾಗರ ಗ್ರಾಮಾಂತರ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಗ್ರಾಮದ ಬಾಲಕಿಯ ಮನೆಗೆ ನೀರು ಕೇಳುವ ನೆಪದಲ್ಲಿ ಹೋಗಿದ್ದ 24 ವರ್ಷದ ಆರೋಪಿ ನೀರು ತರಲು ಬಾಲಕಿ ಅಡುಗೆ ಮನೆಗೆ ಹೋದಾಗ ಹಿಂದಿನಿಂದ ಹೋಗಿ ದೌರ್ಜನ್ಯ ಎಸಗಿದ್ದಾನೆ. ಬಾಲಕಿ ಕಿರುಚಾಡುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದಾನೆ. ಮಾಹಿತಿ ತಿಳಿದ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.

ಆರೋಪಿ ತಲೆಮರಿಸಿಕೊಂಡಿದ್ದು, ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಯುವಕನ ದುಷ್ಕೃತ್ಯ ಖಂಡಿಸಿ ಗ್ರಾಮದ ಜನ ಸಾಗರ ಡಿ.ವೈ.ಎಸ್.ಪಿ. ಕಚೇರಿಗೆ ಆಗಮಿಸಿ ಆರೋಪಿಯನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...