alex Certify ನಿತ್ಯ ಯುವತಿ ಅಡ್ಡಗಟ್ಟಿ ಅಸಭ್ಯ ವರ್ತನೆ, ಲೈಂಗಿಕ ಕಿರುಕುಳ: ದೂರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಿತ್ಯ ಯುವತಿ ಅಡ್ಡಗಟ್ಟಿ ಅಸಭ್ಯ ವರ್ತನೆ, ಲೈಂಗಿಕ ಕಿರುಕುಳ: ದೂರು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದ ಮೇಲೆ ಯುವಕನ ವಿರುದ್ಧ ದೂರು ದಾಖಲಾಗಿದೆ.

ಅಲ್ಲದೆ, ಕೃತ್ಯಕ್ಕೆ ಸಹಕರಿಸುತ್ತಿದ್ದ ಯುವಕನ ಸಹೋದರನ ವಿರುದ್ಧವೂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಿತ್ಯವೂ ಯುವತಿಯನ್ನು ಅಡ್ಡಗಟ್ಟಿ ಯುವಕ ಅಸಭ್ಯವಾಗಿ ವರ್ತಿಸುತ್ತಿದ್ದ. ಇತ್ತೀಚೆಗೆ ಯುವತಿ ಕೆಲಸಕ್ಕೆ ಹೋಗುವ ವೇಳೆ ಅಡ್ಡಗಟ್ಟಿ ಆಕೆಯ ವೇಲ್ ನಿಂದ ಕೈಕಟ್ಟಿ ಬಾಯಿಗೆ ಬಟ್ಟೆ ತುರುಕಿ ಆಕೆಯನ್ನು ಎತ್ತಿಕೊಂಡು ಹೋಗಲು ಯತ್ನಿಸಿದ್ದಾನೆ. ಯುವತಿ ಹೇಗೋ ತಪ್ಪಿಸಿಕೊಂಡು ಪಾರಾಗಿದ್ದಾಳೆ ಎನ್ನಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...