
ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಅಕ್ಕಿಆಲೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ.
ಗುತ್ತಿಗೆ ಕಾರ್ಮಿಕರಾಗಿ ಕಳೆದ ಎರಡು ವರ್ಷಗಳಿಂದ ಕೆಲಸ ಮಾಡುತ್ತಿರುವ 33 ವರ್ಷದ ಮಹಿಳೆಗೆ ಆಸ್ಪತ್ರೆಯಲ್ಲಿ ಎಕ್ಸರೇ ಟೆಕ್ನಿಷಿಯನ್ ಆಗಿರುವ ವ್ಯಕ್ತಿ ಲೈಂಗಿಕ ಕಿರುಕುಳ ನೀಡಿದ್ದಾನೆಂದು ಆರೋಪಿಸಲಾಗಿದೆ.
ಹಾನಗಲ್ ಠಾಣೆ ಪೊಲೀಸರಿಗೆ ದೂರು ನೀಡಲಾಗಿದ್ದು, ಆಸ್ಪತ್ರೆಯಲ್ಲಿ ಯಾರೂ ಇಲ್ಲದ ವೇಳೆ ಮೈಮುಟ್ಟಿ ಕಿರುಕುಳ ನೀಡಲಾಗಿದೆ ಎಂದು ಹೇಳಲಾಗಿದೆ. ಮೊಬೈಲ್ನಲ್ಲಿ ಆತ ಮಾತಾಡಿರುವುದನ್ನು ರೆಕಾರ್ಡ್ ಮಾಡಿಕೊಂಡು ಆಸ್ಪತ್ರೆಯ ವೈದ್ಯಾಧಿಕಾರಿಗಳಿಗೆ ದೂರು ನೀಡಲಾಗಿದೆ. ಪೊಲೀಸರಿಗೂ ದೂರು ನೀಡಲಾಗಿದೆ ಎಂದು ಹೇಳಲಾಗಿದೆ.