ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಗ್ರಾಮವೊಂದರ 17 ವರ್ಷದ ಬಾಲಕಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗ್ರಾಮದ ಯುವಕನೊಬ್ಬ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಬಲವಂತವಾಗಿ ಕರೆದೊಯ್ದು ದೈಹಿಕ ಸಂಪರ್ಕ ಬೆಳೆಸಿದ್ದಾನೆ. ಇದರಿಂದ ಖಿನ್ನತೆಗೆ ಒಳಗಾಗಿದ್ದ ಬಾಲಕಿ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆರೋಪಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಬಾಲಕಿಯ ತಾಯಿ ಚಳ್ಳಕೆರೆ ಠಾಣೆ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.