ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ಸರ್ಕಾರಿ ಬಾಲ ಮಂದಿರದಲ್ಲಿ ಅಮಾನವೀಯ ಕೃತ್ಯ ಬಯಲಾಗಿದೆ. ಸರ್ಕಾರಿ ಬಾಲಮಂದಿರದಲ್ಲಿ ಆಶ್ರಯ ಪಡೆದುಕೊಂಡಿದ್ದ ಬಾಲಕಿಯರಿಗೆ ಕಿರುಕುಳ ನೀಡಲಾಗಿದೆ.
ಬಾಲಕೀರನ್ನು ಕಟ್ಟಿ ಹಾಕಿ ದೈಹಿಕವಾಗಿ ಹಲ್ಲೆ ಮಾಡಿ, ಮಾನಸಿಕವಾಗಿ ಕಿರುಕುಳ ನೀಡಲಾಗಿದೆ. ವೇಶ್ಯಾವಾಟಿಕೆಗೆ ಸಹಕರಿಸುವಂತೆ ಕಿರುಕುಳ ನೀಡುತ್ತಿದ್ದ ಆರೋಪ ಕೇಳಿ ಬಂದಿದೆ. ಚಿಕ್ಕಬಳ್ಳಾಪುರದ ಸರ್ಕಾರಿ ಬಾಲಕಿಯರ ಬಾಲ ಮಂದಿರದಲ್ಲಿ ಘಟನೆ ನಡೆದಿದೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಸೇರಿದ ಬಾಲಮಂದಿರ ಇದಾಗಿದೆ. ಅಧೀಕ್ಷಕಿ, ಸಹಾಯಕಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗಿದೆ. ಮಕ್ಕಳ ಹಕ್ಕುಗಳ ಉಲ್ಲಂಘನೆ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ.
10 ವರ್ಷದ ಇಬ್ಬರು ಬಾಲಕಿಯರ ಮೇಲೆ ಕೃತ್ಯವೆಸಗಿರುವುದು ಸಾಬೀತಾಗಿದೆ. ಚಿಕ್ಕಬಳ್ಳಾಪುರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಮತ್ತು ನ್ಯಾಯಾಧೀಶರ ಸೂಚನೆ ಮೇರೆಗೆ ಕೇಸು ದಾಖಲಿಸಿ ಕ್ರಮ ಕೈಗೊಳ್ಳಲಾಗಿದೆ.