alex Certify ಸಹಪಾಠಿಯಿಂದ ಲೈಂಗಿಕ ದೌರ್ಜನ್ಯ, ಬಾಲಕಿ ಗರ್ಭಿಣಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಹಪಾಠಿಯಿಂದ ಲೈಂಗಿಕ ದೌರ್ಜನ್ಯ, ಬಾಲಕಿ ಗರ್ಭಿಣಿ

ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟದ ಶಾಲೆಯೊಂದರಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ ಬಾಲಕನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಯಳಂದೂರು ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

15 ವರ್ಷದ ಬಾಲಕಿ ಒಂದು ತಿಂಗಳಿನಿಂದ ಶಾಲೆಗೆ ಗೈರು ಹಾಜರಾಗಿದ್ದಾಳೆ. ಶಾಲೆಯ ಮುಖ್ಯ ಶಿಕ್ಷಕರು ವಿದ್ಯಾರ್ಥಿನಿಯ ಮನೆಗೆ ಭೇಟಿ ನೀಡಿ ವಿಚಾರಿಸಿದಾಗ ಆರೋಗ್ಯ ಸರಿಯಿಲ್ಲವೆಂದು ಗೊತ್ತಾಗಿದೆ. ನಂತರ ಶಿಕ್ಷಕರು ಮತ್ತು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ವಿದ್ಯಾರ್ಥಿನಿಯನ್ನು ಯಳಂದೂರು ಪಟ್ಟಣದ ಆಸ್ಪತ್ರೆಗೆ ಕರೆತಂದು ವೈದ್ಯಕೀಯ ಪರೀಕ್ಷೆ ನಡೆಸಿದಾಗ ಆಕೆ ಎರಡು ತಿಂಗಳ ಗರ್ಭಿಣಿ ಎನ್ನುವುದು ಗೊತ್ತಾಗಿದೆ.

ಬಳಿಕ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡಿ ಯಳಂದೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿ ಬಾಲಕಿಯ ಹೇಳಿಕೆ ಪಡೆದುಕೊಂಡಿದ್ದಾರೆ.

ಅದೇ ಶಾಲೆಯ ಅಪ್ರಾಪ್ತ ಬಾಲಕನ ಜೊತೆ ಸಂಪರ್ಕ ಇರುವುದು ಬೆಳಕಿಗೆ ಬಂದಿದೆ. ಪೋಕ್ಸೋ ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ. ಆರೋಪಿ ಬಾಲಕ ಪರಾರಿಯಾಗಿದ್ದು, ಆತನಿಗಾಗಿ ಹುಡುಕಾಟ ನಡೆಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...