ಶಿವಮೊಗ್ಗ ಜಿಲ್ಲೆ ಸಾಗರದ ವರದಹಳ್ಳಿ ರಸ್ತೆಯ ವನಶ್ರೀ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಹೆಚ್.ಪಿ. ಮಂಜುಪ್ಪ ವಿರುದ್ಧ ದಲಿತ ಸಮುದಾಯಕ್ಕೆ ಸೇರಿದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದ್ದು, ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವನಶ್ರೀ ಶಿಕ್ಷಣ ಸಂಸ್ಥೆಯಲ್ಲಿ ಓದುತ್ತಿರುವ ಬಾಲಕಿಯ ಮೇಲೆ ಶಾಲೆಯಲ್ಲಿ ಯಾರೂ ಇಲ್ಲದ ವೇಳೆ ಮಂಜಪ್ಪ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗಿದೆ. ಆರೋಪಿ ಮಂಜಪ್ಪ ತಲೆಮರೆಸಿಕೊಂಡಿದ್ದಾರೆ.
ಪೋಕ್ಸೋ, ಪರಿಶಿಷ್ಟ ಜಾತಿ ಪಂಗಡ ಮೇಲಿನ ದೌರ್ಜನ್ಯ ತಡೆಯು ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಈ ಹಿಂದೆಯೂ ಮಂಜಪ್ಪ ಶಾಲೆಯಲ್ಲಿ ಓದುತ್ತಿದ್ದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿದ್ದರು.