alex Certify ಹೊಲಕ್ಕೆ ಹೋಗಿದ್ದ ವೇಳೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ ಜೀವಾವಧಿ ಶಿಕ್ಷೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೊಲಕ್ಕೆ ಹೋಗಿದ್ದ ವೇಳೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ ಜೀವಾವಧಿ ಶಿಕ್ಷೆ

ಶಿವಮೊಗ್ಗ: ಶಿವಮೊಗ್ಗ ತಾಲ್ಲೂಕಿನ ಗ್ರಾಮವೊಂದರ 7 ವರ್ಷದ ಬಾಲಕಿ ಹೊಲಕ್ಕೆ ಹೋಗಿದ್ದ ಸಂದರ್ಭದಲ್ಲಿ ಲೈಂಗಿಕ ದೌರ್ಜನ್ಯವಸೆಗಿದ್ದ ವ್ಯಕ್ತಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

ನಾಗಪ್ಪ(65) ಎಂಬ ವ್ಯಕ್ತಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುತ್ತಾನೆಂದು ನೀಡಿದ ದೂರಿನ ಮೇರೆಗೆ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾತ್ತು.

ಆಗಿನ ತನಿಖಾಧಿಕಾರಿ ಪಿಐ ಅಭಯ್‌ ಪ್ರಕಾಶ್‌ ಸೋಮನಾಳ್ ಪ್ರಕರಣದ ತನಿಖೆ ಕೈಗೊಂಡು ಸದರಿ  ಆರೋಪಿತನ ವಿರುದ್ಧ ಘನ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.

The Addl District and Sessions Court, FTSC–II (POCSO) Shivamogga ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದು ನ್ಯಾಯಾಧೀಶರಾದ ಮೋಹನ ಜೆ.ಎಸ್ ಅವರು ಆರೋಪಿತ ನಾಗಪ್ಪನಿಗೆ ಶಿಕ್ಷೆ ನೀಡಿದ್ದಾರೆ.

ನಾಗಪ್ಪನ ವಿರುದ್ಧ ಪೋಕ್ಸೋ ಕಾಯ್ದೆ ಅಡಿಯಲ್ಲಿ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಜೀವಾವಧಿ ಶಿಕ್ಷೆ ಮತ್ತು 60,000 ರೂ. ದಂಡ, ದಂಡವನ್ನು ಕಟ್ಟಲು ವಿಫಲನಾದರೆ ಹೆಚ್ಚುವರಿಯಾಗಿ 6 ತಿಂಗಳು ಸಾದಾ ಕಾರವಾಸ ಶಿಕ್ಷೆ ನೀಡಿ  ಆದೇಶ ನೀಡಿದ್ದಾರೆ. ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕ ಹರಿಪ್ರಸಾದ್ ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...