alex Certify ಹೊಟ್ಟೆ ನೋವು ಎಂದ ಪುತ್ರಿಯನ್ನು ಆಸ್ಪತ್ರೆಗೆ ಕರೆದೊಯ್ದ ಪೋಷಕರಿಗೆ ಶಾಕ್: ಹೆಣ್ಣು ಮಗುವಿಗೆ ಜನ್ಮ ನೀಡಿದ ಪಿಯುಸಿ ವಿದ್ಯಾರ್ಥಿನಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೊಟ್ಟೆ ನೋವು ಎಂದ ಪುತ್ರಿಯನ್ನು ಆಸ್ಪತ್ರೆಗೆ ಕರೆದೊಯ್ದ ಪೋಷಕರಿಗೆ ಶಾಕ್: ಹೆಣ್ಣು ಮಗುವಿಗೆ ಜನ್ಮ ನೀಡಿದ ಪಿಯುಸಿ ವಿದ್ಯಾರ್ಥಿನಿ

ಶಿವಮೊಗ್ಗ: ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಪಿಯುಸಿ ವಿದ್ಯಾರ್ಥಿನಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ ನಡೆದಿದೆ.

ವಿದ್ಯಾರ್ಥಿನಿ ಸಾಗರದಲ್ಲಿ ವಾಸವಾಗಿದ್ದು, ಸೊರಬದಲ್ಲಿ ಓದುತ್ತಿರುವ 22 ವರ್ಷದ ಆರೋಪಿ ವಿದ್ಯಾರ್ಥಿನಿ ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಬಂದು ಕಳೆದ ಒಂದು ವರ್ಷದಿಂದ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಇದರಿಂದಾಗಿ ಗರ್ಭಿಣಿಯಾದ ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿದ್ದಾಳೆ.

ಮೂರು ದಿನಗಳ ಹಿಂದೆ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಆಕೆಯನ್ನು ಪೋಷಕರು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಗರ್ಭಿಣಿಯಾಗಿರುವ ವಿಚಾರ ಬೆಳಕಿಗೆ ಬಂದಿದೆ. ನಂತರ ಸಾಗರದ ಆಸ್ಪತ್ರೆಯಲ್ಲಿ ವಿದ್ಯಾರ್ಥಿನಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಸಾಗರ ಪೊಲೀಸರಿಗೆ ವಿದ್ಯಾರ್ಥಿನಿ ನೀಡಿದ ದೂರಿನ ಅನ್ವಯ ಪೋಕ್ಸೋ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...