ಚಿತ್ರದುರ್ಗ: ಪುಂಡರ ಕಿರುಕುಳದಿಂದ ಬೇಸತ್ತ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಶೀರನಕಟ್ಟೆಯಲ್ಲಿ ನಡೆದಿದೆ.
17 ವರ್ಷದ ವಿದ್ಯಾರ್ಥಿನಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮುದ್ದಪ್ಪ, ಸುದೀಪ್, ಕೋಟಿ, ಅಭಿ ವಿರುದ್ಧ ಕಿರುಕುಳ ನೀಡಿದ ಆರೋಪದ ಮೇಲೆ ದೂರು ನೀಡಲಾಗಿದೆ. ವಿದ್ಯಾರ್ಥಿನಿ ಕಾಲೇಜಿಗೆ ಹೋಗುವಾಗ, ಬರುವಾಗ ಕಿರುಕುಳ ನೀಡುತ್ತಿದ್ದರು. ಜಡೆ ಹಿಡಿದು ಎಳೆದು ಅಶ್ಲೀಲವಾಗಿ ಮಾತನಾಡಿ ಕಿರುಕುಳ ನೀಡಿದ್ದರು. ಈ ಬಗ್ಗೆ ವಿದ್ಯಾರ್ಥಿನಿ ಪೋಷಕರ ಬಳಿ ಹೇಳಿದ್ದಳು ಎನ್ನಲಾಗಿದೆ.
ವಿದ್ಯಾರ್ಥಿನಿ ಪೋಷಕರು ಹೊಸದುರ್ಗ ಠಾಣೆಗೆ ದೂರು ನೀಡಿದ್ದಾರೆ. ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.