ಕಾರವಾರ: ಉತ್ತರ ಕನ್ನಡ ಜಿಲ್ಲೆ ಹಳಿಯಾಳ ತಾಲೂಕಿನ ಗ್ರಾಮೀಣ ಪ್ರದೇಶದ ಶಾಲೆಯೊಂದರ ಮುಖ್ಯ ಶಿಕ್ಷಕ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಂಧಿತರಾಗಿದ್ದಾರೆ.
ಮುಖ್ಯ ಶಿಕ್ಷಕ ಮನೋಹರ ಶೆಟ್ಟಿ(59) ಬಂಧಿತ ಆರೋಪಿ. ಹಳಿಯಾಳ ಠಾಣೆ ಪೋಲೀಸರು ಬುಧವಾರ ಮನೋಹರ ಶೆಟ್ಟಿಯನ್ನು ಬಂಧಿಸಿದ್ದಾರೆ.
ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಪೋಷಕರು ನೀಡಿದ ದೂರು ನೀಡಿದ್ದು, ಪೋಕ್ಸೊ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿತ ಮುಖ್ಯ ಶಿಕ್ಷಕ ಮನೋಹರ ಶೆಟ್ಟಿಯನ್ನು ಬಂಧಿಸಿದ್ದಾರೆ.