ಕಲ್ಬುರ್ಗಿ: ವಸತಿ ಶಾಲೆ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕು ಕುಂಚಾವರಂ ಠಾಣೆ ಪೊಲೀಸರು ಪ್ರಾಚಾರ್ಯ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ.
ಪ್ರೌಢಶಾಲೆ ವಿದ್ಯಾರ್ಥಿನಿಯರಿಗೆ ವಸತಿ ಶಾಲೆಯ ಪ್ರಾಚಾರ್ಯ ಮತ್ತು ಕಂಪ್ಯೂಟರ್ ಆಪರೇಟರ್ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದ್ದು, ಪೋಷಕರು ಆಕ್ರೋಶ ವ್ಯಕ್ತಪಡಿಸಿ ಸಿಬ್ಬಂದಿಯನ್ನು ಥಳಿಸಿದ್ದಾರೆ.
ವಿದ್ಯಾರ್ಥಿನಿಯರ ಮೈಕೈ ಮುಟ್ಟುವುದು, ಮಲಗಿದಾಗ ಇಣುಕಿ ನೋಡುವುದು, ಅಸಭ್ಯ ವರ್ತನೆ, ಅಶ್ಲೀಲ ಮಾತುಗಳು ಸೇರಿದಂತೆ ಹಲವು ರೀತಿಯಲ್ಲಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಬಗ್ಗೆ ವಿದ್ಯಾರ್ಥಿನಿಯರಿಂದ ಆರೋಪ ಕೇಳಿ ಬಂದಿದ್ದು, ಮಾಹಿತಿ ಕಂಪ್ಯೂಟರ್ ಆಪರೇಟರ್ ನನ್ನು ಥಳಿಸಿದ್ದಾರೆ.
ಹಿರಿಯ ಪೊಲೀಸ್ ಅಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಊಟ ಬಿಟ್ಟು ಪ್ರತಿಭಟನೆ ನಡೆಸಿದ ಮಕ್ಕಳ ಮನವೊಲಿಸಿ ತಾವೇ ಊಟ ಬಡಿಸಿದ್ದಾರೆ. ಕುಂಚಾವರಂ ಠಾಣೆಗೆ ದೂರು ನೀಡಲಾಗಿದ್ದು, ಪ್ರಾಚಾರ್ಯ ಮತ್ತು ಕಂಪ್ಯೂಟರ್ ಆಪರೇಟರ್ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.